ಪೊಗರು ಸಿನಿಮಾದ ವಿವಾದ ಬೆನ್ನಲ್ಲೇ, ‘ಸಮುದಾಯಕ್ಕೆ ನೋವಾಗಿದೆ ಎನ್ನುವ ಮಾತು ನಮ್ಮ ತಂಡಕ್ಕೂ ಬೇಸರ ತಂದಿದೆ’ ಎಂದು ಕ್ಷಮೆ ಕೋರಿದ ನಟ ಧ್ರುವ ಸರ್ಜಾ

in ಸಿನಿಮಾ 1,133 views

ಇತ್ತೀಚೆಗೆ ತೆರೆಕಂಡ ನಂದ ಕಿಶೋರ್ ನಿರ್ದೇಶನದ ‘ಪೊಗರು’ ಸಿನಿಮಾದಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡಲಾಗಿದೆ ಎನ್ನುವ ಆರೋಪಕ್ಕೆ ನಾಯಕ ನಟ ಧ್ರುವ ಸರ್ಜಾ ಕ್ಷಮೆ ಕೇಳಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿಯಾದ ಹೇಳಿಕೆಗಳಿವೆ. ಇದರಿಂದ ಸಮುದಾಯದ ಜನರಿಗೆ ನೋವುಂಟಾಗಿದೆ. ಕೂಡಲೇ ಚಿತ್ರತಂಡ, ಪೊಗರು ಚಿತ್ರದ ನಿರ್ದೇಶಕ, ನಿರ್ಮಾಪಕರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ವಾಣಿಜ್ಯ ಮಂಡಳಿಗೆ ದೂರು ನೀಡಲು ನಿರ್ಧರಿಸಲಾಗಿದೆ.ಜೊತೆಗೆ ಸಿನಿಮಾದಲ್ಲಿರುವ ದೃಶ್ಯವನ್ನು ತೆಗೆದುಹಾಕಬೇಕು. ಇಲ್ಲದಿದ್ದರೆ ಮುಂದೆ ಹೋರಾಟ ಮಾಡ್ತೀವಿ ಎಂದು ಸಚ್ಚಿದಾನಂದ‌ಮೂರ್ತಿ ಪೊಗರು ಸಿನಿಮಾ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಫೆ. 23ರಂದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಈ ಬಗ್ಗೆ ಮನವಿ ಸಲ್ಲಿಸುತ್ತೇವೆ. ಫೆ.24ರ ಬುಧವಾರ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುತ್ತೇವೆ ಎಂದು ಸಚ್ಚಿದಾನಂದ‌ಮೂರ್ತಿ ಎಂದು ಎಚ್ಚರಿಕೆ ನೀಡಿದ್ದರು.

Advertisement

Advertisement

 

Advertisement

ಸಿನಿಮಾದ ದೃಶ್ಯವೊಂದರಲ್ಲಿ ಅರ್ಚಕರು ಹೋಮ ಮಾಡ್ತಾ ಇರ್ತಾರೆ. ಆ ವೇಳೆಗೆ ವಿಲನ್​ಗಳು ಎಂಟ್ರಿಯಾಗಿ ಹೋಮಕ್ಕೆ ತಡೆಯೊಡ್ಡುತ್ತಾರೆ. ಈ ಸಂದರ್ಭ ವಿಲನ್ ಒಬ್ಬ ಅರ್ಚಕನ ಹೆಗಲ ಮೇಲೆ ಕಾಲಿಟ್ಟು ಹೊಡೆಯುತ್ತಾನೆ. ಸಿನಿಮಾದಲ್ಲಿನ ಈ ದೃಶ್ಯದ ಬಗ್ಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ‌ಮೂರ್ತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇನ್ನು ಧ್ರುವ ಸರ್ಜಾ ಈ ಕುರಿತಂತೆ ಟ್ವೀಟ್ ಮಾಡಿದ್ದು “ನಮ್ಮ ಇಡೀ ಕುಟುಂಬ ಹನುಮ ಭಕ್ತರು, ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ.

Advertisement

 

 

ನಮ್ಮ ಇಡೀ ವಂಶವೇ ಹಿಂದುತ್ವದ ಪದ್ದತಿ ಆಚರಿಸುತ್ತಾ, ಗೌರವಿಸುತ್ತಾ ಬದುಕುತ್ತಿದ್ದೇವೆ. ತಾತನ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿ ಬದುಕಿದ್ದೇವೆ.
“ಕಲೆಯೇ ಧರ್ಮ, ನಾವು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇವೆ. ಚಿತ್ರದ ಕಥೆ, ಪಾತ್ರ ಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹಾ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ. ಈ ಕಾರಣಕ್ಕಾಗಿ ಬೇಷರತ್ ಕ್ಷಮೆ ಕೇಳುತ್ತೇನೆ.

“ನಿಮಗೆ ಬೇಸರವಾಗಿರೋ ದೃಶ್ಯಗಳನ್ನು ಕತ್ತರಿಸಿದ್ದೇವೆ.
ಮತ್ತೆ ಸೆನ್ಸಾರ್ ಆದಮೇಲೆ ನಿಮ್ಮೆದುರು ಮಾತನಾಡೋಣ ಎಂದು ನಾನೇ ನಿರ್ಧರಿಸಿದ್ದೆ. ಈಗ ಸಿನಿಮಾದಲ್ಲಿನ ಕೆಲವು ದೃಶ್ಯಗಳನ್ನು ತೆಗೆದು ಹಾಕಲು ತಂತ್ರಜ್ಞರ ತಂಡ ಸಿದ್ದವಾಗಿದೆ. ನನ್ನ ಮನವಿಯನ್ನು ಪುರಸ್ಕರಿಸಿ ಎಂದಿನಂತೆ ನಿಮ್ಮ ಆಶೀರ್ವಾದವಿರಲಿ.” ಎಂದಿದ್ದಾರೆ.ಸಿನಿಮಾ ದೃಶ್ಯಗಳಲ್ಲಿ ಅರ್ಚಕನ ಭುಜದ ಮೇಲೆ ಖಳನಟ ಕಾಲಿಡುವುದು, ಊಟ, ತಿಂಡಿಗಳ ಬಗ್ಗೆ ಮಾತನಾಡಿರುವುದು ಸೇರಿ ಅನೇಕ ಆಕ್ಷೇಪಾರ್ಹ ದೃಶ್ಯಗಳಿದೆ ಎಂದು ಬ್ರಾಹ್ಮಣ ಸಮುದಾಯ ಆರೋಪಿಸಿ ವಿವಾದಿತ ದೃಶ್ಯಗಳನ್ನು ತೆಗೆದು ಹಾಕಬೇಕೆಂದು ಹೋರಾಟ ನಡೆಸಿತ್ತು.

ಇದಕ್ಕೆ ಒಪ್ಪಿಕೊಂಡ ಚಿತ್ರತಂಡ ಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನು ಕತ್ತರಿಸಿ ಸಿನಿಮಾವನ್ನು ಮತ್ತೆ ಸೆನ್ಸಾರ್ ಮಂಡಳಿ ಮುಂದೆ ಇಡಲಾಗುತ್ತದೆ ಎಂದು ಹೇಳಿಕೆಯನ್ನು ನೀಡಿದೆ.ಸೆನ್ಸಾರ್ ಮಂಡಳಿ ಒಪ್ಪಿಗೆ ಮೇರೆಗೆ ಮತ್ತೆ ಎಂದು ಚಿತ್ರ ಮಂದಿರಕ್ಕೆ ಲಗ್ಗೆಯಿಡುವ ಪೊಗರು ಸಿನಿಮಾವನ್ನು ವಿವಾದದ ಬಳಿಕ ಹೇಗೆ ಒಪ್ಪಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕು ಅಷ್ಟೇ.

Advertisement