ಸಿನಿಮಾ ಕಾರ್ಮಿಕರಿಗೆ ಉಪ್ಪಿ ಸಹಾಯ ಹಸ್ತ…!

in Kannada News 37 views

ಇಷ್ಟು ದಿನ ಮುಖ್ಯಮಂತ್ರಿಗಳಿಗೆ ಹಾಗೂ ಸರ್ಕಾರಕ್ಕೆ ಮೆಚ್ಚುಗೆ ಹಾಗೂ ಸಲಹೆ ನೀಡುತ್ತಿದ್ದ ನಟ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಸಿನಿಮಾ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹಲವು ನಟರು ಹಲವು ರೀತಿ ಸಹಾಯ ಮಾಡುತ್ತಿದ್ದು ನಟ ಉಪೇಂದ್ರ ಸಿನಿಮಾ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿದ್ದಾರೆ. ಬಡವರ ಹಸಿವು ನೀಗಿಸಲು ಮುಂದಾಗಿದ್ದಾರೆ.

Advertisement

 

Advertisement

Advertisement

 

Advertisement

ಈಗಾಗಲೇ ಹಲವು ನಟ-ನಟಿಯರು ಸಹಾಯ ಮಾಡಿದ್ದು ಕೆಲವರು ಪಿ.ಎಂ ಕೇರ್ಸ್ ಹಾಗೂ ಸಿ.ಎಂ ಪರಿಹಾರ ನಿಧಿಗೆ ನೀಡಿದರೆ ಇನ್ನೂ ಕೆಲವರು ಬಡವರಿಗೆ ಆಹಾರ ಪದಾರ್ಥಗಳನ್ನು ದಾನ ಮಾಡುವ ಮೂಲಕ ನೆರವಾಗುತ್ತಿದ್ದಾರೆ. ಮಾತ್ರವಲ್ಲದೆ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವು ನಟರು ಸಿನಿಮಾ ಕಾರ್ಮಿಕರ ನೆರವಿಗಿ ನಿಂತಿದ್ದು ನೇರವಾಗಿ ಅವರ ಖಾತೆಗೆ ಹಣವನ್ನ ಸಂದಾಯ ಮಾಡುತ್ತಿದ್ದಾರೆ. ಸಿನಿಮಾ ಕಾರ್ಮಿಕರು ದಿನಗೂಲಿ ನೆಚ್ಚಿ ಜೀವನ ಸಾಗಿಸುತ್ತಾರೆ. ಇದೀಗ ತಿಂಗಳುಗಟ್ಟಲೆ ಕೆಲಸವಿಲ್ಲದೆ ಪರದಾಡುತ್ತಿದ್ದು ತುತ್ತು ಅನ್ನಕ್ಕೂ ಪರಿತಪಿಸುತ್ತಿದ್ದಾರೆ. ಇದೆಲ್ಲಾವನ್ನೂ ಅರಿತ ನಟ-ನಟಿಯರು ಅವರ ಸಹಾಯಕ್ಕೆ ಧಾವಿಸುತ್ತಿದ್ದಾರೆ. ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ.

 

 

ಇದೀಗ ರಿಯಲ್ ಸ್ಟಾರ್ ಉಪೇಂದ್ರ ಸಹ ಅವರ ಕಷ್ಟಕ್ಕೆ ಮಿಡಿಯುತ್ತಿದ್ದು ನಾಲ್ಕುವರೆ ಲಕ್ಷ ರೂ.ಗಳ ಚೆಕ್ ಅನ್ನ ನೀಡಿದ್ದಾರೆ. ಕನ್ನಡ ಚಲನಚಿತ್ರ ಕಾರ್ಮಿಕ ಸಂಘಗಳ ಒಕ್ಕೂಟದ ಒಟ್ಟು 18 ಸಂಘಗಳಿಗೆ ತಲಾ 25 ಸಾವಿರ ರೂ. ನೀಡಿದ್ದಾರೆ. ಈ ಕುರಿತು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ಅವರು ಕನ್ನಡ ಚಲನಚಿತ್ರ ಕಾರ್ಮಿಕ ಸಂಘಗಳ ಒಕ್ಕೂಟದ ಒಟ್ಟು 18 ಸಂಘಗಳಿಗೆ ತಲಾ 25 ಸಾವಿರದಂತೆ 4,50,000/- ರೂ.ಗಳನ್ನು ನೀಡುತ್ತಿದ್ದೇನೆ. ಆದಷ್ಟು ಬೇಗ ಈ ಕೊರೊನಾ ಸಮಸ್ಯೆಯಿಂದ ಎಲ್ಲರೂ ಹೊರ ಬರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಾ ನಿಮ್ಮ ಜೊತೆ ಎಂದೆಂದೂ ನಾನಿರುತ್ತೇನೆ ವಿಶ್ವಾಸವಿರಲಿ ಎಂದು ಬರೆದುಕೊಂಡಿದ್ದಾರೆ.

 

ಸಾಮಾಜಿಕ ಜಾಲತಾಣಗಳ ಮೂಲಕವೇ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸಲಹೆ ಹಾಗೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದ ನಟ ಉಪೇಂದ್ರ ಇದೀಗ ಸಹಾಯ ಮಾಡಿದ್ದಾರೆ. ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ನಡೆಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೆ ಮುಖ್ಯಮಂತ್ರಿಗಳಿಗೂ ಹೀಗೆ ಪ್ರತಿ ಕ್ಷೇತ್ರದ ಸಚಿವರೊಂದಿಗೆ ಚರ್ಚೆ ನಡೆಸಿ ಪರಿಹಾರ ಕೈಗೊಳ್ಳಿ ಎಂದು ಸಲಹೆ ನೀಡಿದರು.

– ಸುಷ್ಮಿತಾ

Advertisement
Share this on...