eshwarappa yathnal statement

News Updates ಯತ್ನಾಳ್ ಅವರನ್ನು ಬಿಜೆಪಿಯಿಂದ ಹೊರಹಾಕಿ, ಕ್ರಮಕ್ಕೆ ಬಿಎಸ್ ವೈ ಆಪ್ತ ವಲಯ ಒತ್ತಾಯ.

in ರಾಜಕೀಯ 199 views

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪದೇ ಪದೇ ಬಹಿರಂಗ ಹೇಳಿಕೆ ನೀಡುತ್ತಿರುವ ಶಾಸಕ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂಬ ಚರ್ಚೆ ಬಿಎಸ್ ಯಡಿಯೂರಪ್ಪ ಆಪ್ತ ಬಳಗದಲ್ಲಿ ನಡೆಯುತ್ತಿದೆ. ಯತ್ನಾಳ್ ಪದೇ ಪದೇ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುವ ನಡೆ ಬಿಜೆಪಿಗೆ ಮುಜುಗರ ಉಂಟುಮಾಡುತ್ತಿದೆ ಎಂಬ ಬಗ್ಗೆ ಚರ್ಚೆ ಆಗಿದೆ. ಅಲ್ಲದೇ ಕೆಲ ಬಿಜೆಪಿ ನಾಯಕರು ಯತ್ನಾಳ್ ಹೇಳಿಕೆಯನ್ನು ಖಂಡಿಸಿದ್ದಾರೆ.

Advertisement

ಯತ್ನಾಳ್ ಅವರನ್ನು ಬಿಜೆಪಿಯಿಂದ ಹೊರಹಾಕಿ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಯಕತ್ವ ಬದಲಾವಣೆ ಕುರಿತಾಗಿ ಬಹಿರಂಗ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ನೋಟಿಸ್ ನೀಡದೆ ಶಿಸ್ತು ಕ್ರಮ ಕೈಗೊಳ್ಳುವಂತೆ ಸಚಿವ ಕೆ.ಎಸ್ ಈಶ್ವರಪ್ಪ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಸಿಎಂ ಯಡಿಯೂರಪ್ಪ ವಿರುದ್ಧ ಇಂತಹ ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ನೋಟಿಸ್ ನೀಡದೆ ಕೂಡಲೇ ಕ್ರಮ ಜರಗಿಸಬೇಕು ಎಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಆಗ್ರಹಿಸಿದ್ದಾರೆ. ಮುಂದುವರೆದು ಮಾತನಾಡಿದ ಅವರು, ಯತ್ನಾಳ್ ಅವರನ್ನು ಕೂಡಲೇ ಬಿಜೆಪಿಯಿಂದ ಹೊರಹಾಕಬೇಕು, ಅವರು ನೀಡಿರುವ ಹೇಳಿಕೆ ಮೂರ್ಖತನದ ಹೇಳಿಕೆಯಾಗಿದೆ. ಈ ನಿಟ್ಟಿನಲ್ಲಿ ಯತ್ನಾಳ್ ವಿರುದ್ಧ ಕ್ರಮ ಅಗತ್ಯ. ಇದರಲ್ಲಿ ಯಾವುದೇ ಅನುಮಾನವೇ ಬೇಡ. ಕೆಲವರಿಗೆ ಬಾಯಿ ಚಪಲವಿದೆ ಅದಕ್ಕೆ ಇಂತಹ ಹೇಳಿಕೆ ನೀಡುತ್ತಾರೆ. ಅಂತವರನ್ನು ಉಚ್ಚಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Advertisement

 

Advertisement

Advertisement

ವಿವಾದಾತ್ಮಕ ಹೇಳಿಕೆ ನೀಡುವವರನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ

ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ. ಯಡಿಯೂರಪ್ಪ ಅವರು ಅಧಿಕಾರ ಪೂರ್ಣಗೊಳಿಸಲಿದ್ದು, ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋಗಲಿದ್ದೇವೆ. ವಿವಾದಾತ್ಮಕ ಹೇಳಿಕೆ ನೀಡುವವರನ್ನು ಪಕ್ಷದ ಹೈಕಮಾಂಡ್ ಗಮನಿಸುತ್ತಿದೆ. ಅಶಿಸ್ತು ಪ್ರದರ್ಶಿಸುವವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಯತ್ನಾಳ್ ಹೇಳಿಕೆ ಕುರಿತು ಆಕ್ಷೇಪ ವ್ಯಕ್ತಪಡಿಸಿದರು.

ಯೋಗ ಯೋಗ್ಯತೆ ಇದ್ದವರು ಸಿಎಂ ಆಗ್ತಾರೆ
“ಯೋಗ ಯೋಗ್ಯತೆ ಇದ್ದವರು ಸಿಎಂ ಆಗ್ತಾರೆ ಎಂದು ಹೇಳುವ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ ಸಂಕನೂರು ಅವರ ಪರ ಪ್ರಚಾರದಲ್ಲಿ ಕೈಗೊಂಡ ನಂತರ ಮಾತನಾಡಿದ ಅವರು, ಯಡಿಯೂರಪ್ಪ ಅವರು ನಮ್ಮ ನಾಯಕ ಮತ್ತು ಪಕ್ಷವೇ ಅವರನ್ನು ಆಯ್ಕೆ ಮಾಡಿದೆ. ಸಿಎಂ ವಿರುದ್ಧ ಯತ್ನಾಳ್ ಯಾವುದೇ ಕಾರಣದಿಂದ ಮಾತನಾಡಿರಲಿ, ಅದರ ಬಗ್ಗೆ ನಾನು ಕಾಮೆಂಟ್ ಮಾಡುವುದಿಲ್ಲ. ಕೊರೋನಾ ಕಾರಣದಿಂದಾಗಿ ಸರ್ಕಾರದ ಆರ್ಥಿಕ ಸ್ಥಿತಿ ಸಾಮಾನ್ಯ ಸ್ಥಿತಿಗೆ ಬಂದಿಲ್ಲ ಮತ್ತು ಶಾಸಕರಿಗೆ ತಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ವಿನಿಯೋಗಿಸಲು ಯಾವುದೇ ಹಣವಿಲ್ಲ ಎಂದರು.
All rights reserved Namma kannada entertainment.

Advertisement
Share this on...