ಚಿರ ನಿದ್ರೆಗೆ ಜಾರಿದ ಸ್ಯಾಂಡಲ್’ವುಡ್’ನ ಖ್ಯಾತ ನಟ ಚಿರಂಜೀವಿ ಸರ್ಜಾ …

in ಸಿನಿಮಾ 74 views

ಸ್ಯಾಂಡಲ್’ವುಡ್’ನ ಖ್ಯಾತ ನಟ ಚಿರಂಜೀವಿ ಸರ್ಜಾ ತೀವ್ರ ಹೃದಯಾಘಾತದಿಂದ ಇಂದು ಭಾನುವಾರ ಕೊನೆಯುಸಿರೆಳೆದಿದ್ದಾರೆ. ನಿನ್ನೆ ತೀವ್ರತರಹದ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಚಿರಂಜೀವಿ ಸರ್ಜಾ ಸಾವನ್ನಪ್ಪಿದ್ದಾರೆ.
ಕೆಲವು ಮೂಲಗಳ ಪ್ರಕಾರ ಚಿರಂಜೀವಿ ಸರ್ಜಾಗೆ ಶನಿವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದು ಹೃದಯ ಸಂಬಂಧಿ ಕಾಯಿಲೆ ಇರಬಹುದು ಎಂದು ಕುಟುಂಬದವರು ಭಾವಿಸಿರಲಿಲ್ಲ. ಆದರೆ ಉಸಿರಾಟದ ತೊಂದರೆ ಜೊತೆಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತಂತೆ. ಆಗಲೇ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ.

Advertisement

 

Advertisement


ಸದ್ಯ ಜಯನಗರದ ಅಪೊಲೊ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಮೃತದೇಹ ಇಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪೋಲೀಸ್ ಇಲಾಖೆಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ಅಪೊಲೊ ಆಸ್ಪತ್ರೆ ಮೂಲಗಳ ಮಾಹಿತಿ ನೀಡಿವೆ. ಚಿರಂಜೀವಿ ಸರ್ಜಾ ನಟಿ ಮೇಘನಾ ರಾಜ್ ಅವರ ಜೊತೆ 2017ರಲ್ಲಿ ನಿಶ್ವಿತಾರ್ಥ ಮಾಡಿಕೊಂಡಿದ್ದರು. 2018ರಲ್ಲಿ ವಿವಾಹವಾಗಿದ್ದರು. ಅವರ ಸಾವಿಗೆ ಇದೀಗ ಇಡೀ ಕನ್ನಡ ಚಿತ್ರರಂಗ ಕಂಬನಿ ಸುರಿಸಿದೆ. ಬೆಂಗಳೂರಿನಲ್ಲಿ ಜನಿಸಿದ ಚಿರಂಜೀವಿ ಸರ್ಜಾ ತಮ್ಮ ಬಾಲ್ಯ ಶಿಕ್ಷಣವನ್ನು ಬಾಲ್ಡ್ವಿನ್ ಬಾಲಕರ ಫ್ರೌಡ ಶಾಲೆಯಲ್ಲಿ ಪೂರ್ಣಗೊಳಿಸಿದರು. ಸುಮಾರು 4 ವರ್ಷಗಳಿಂದ ಅವರ ಚಿಕ್ಕಪ್ಪರಾದ ಅರ್ಜುನ್ ಸರ್ಜಾ ರವರ ಸಹಾಯಕ ನಿರ್ದೇಶಕರಾಗಿ ಕೆಲಸವನ್ನು ಮಾಡಿದರು.

Advertisement

Advertisement

ನಂತರ 2009 ರಲ್ಲಿ ತೆರೆಗೆ ಬಂದ ವಾಯುಪುತ್ರ ಎಂಬ ಕನ್ನಡ ಚಲನಚಿತ್ರದಲ್ಲಿ ಮುಖ್ಯಪಾತ್ರ ವಹಿಸಿದರು. ಗಂಡೆದೆ, ಚಿರು, ದಂಡಂ ದಶಗುಣಂ, ಕೆಂಪೇಗೌಡ, ವರದನಾಯಕ, ವಿಜ಼ಲ್, ಚಂದ್ರಲೇಖ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದಾರೆ.ಜನವರಿ ತಿಂಗಳಲ್ಲಿ ಏಪ್ರಿಲ್ ಚಿತ್ರದ ಮುಹೂರ್ತ  ನಡೆದಿತ್ತು.

Advertisement
Share this on...