ಜೀವ ಉಳಿಸುವ ಕಾರ್ಯಕ್ಕೆ ಮುಂದಾದ ಮೆಗಾಸ್ಟಾರ್…!

in Kannada News 17 views

ದೇಶದಲ್ಲಿ ಕೊರೊನಾದಿಂದ ಜನರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಈ ವೇಳೆ ಅನೇಕ ನಟ-ನಟಿಯರು ಸೇರಿದಂತೆ ಕಲಾವಿದರು ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಅದರಂತೆ ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ ಕೋರೋನಾ ಸಂಕಷ್ಟದ ಸಮಯದಲ್ಲಿ ದೇಣಿಗೆ ನೀಡುವ ಮೂಲಕ ಸಹಾಯಹಸ್ತ ಚಾಚಿದರು. ಇದೀಗ ಚಿರಂಜೀವಿ ಜೀವ ಉಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

Advertisement

 

Advertisement

Advertisement

 

Advertisement

ಮೆಗಾಸ್ಟಾರ್ ಚಿರಂಜೀವಿ ಸದಾ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿರುತ್ತಾರೆ. ಇದರ ನಡುವೆಯೇ ಚಿರಂಜೀವಿ ಅತ್ಯುತ್ತ ಮಹತ್ವದ ಸೇವೆಯೊಂದಕ್ಕೆ ಚಾಲನೆ ಕೊಟ್ಟಿದ್ದಾರೆ. ಅಷ್ಟೇ ಅಲ್ಲದೆ ಅದನ್ನು ಅಭಿಯಾನದ ರೂಪದಲ್ಲಿ ಬದಲಾಯಿಸುವಂತೆ ತಮ್ಮ ಅಭಿಮಾನಿಗಳಿಗೆ, ನಾಗರಿಕರಿಗೆ ಕರೆಕೊಟ್ಟಿದ್ದಾರೆ. ಕೋರೊನಾ ಲಾಕ್ ಡೌನ್ ಆದ ನಂತರ ರಕ್ತದಾನ ಮಾಡುವವರ ಸಂಖ್ಯೆ ತೀವ್ರವಾಗಿ ಕುಸಿದಿರುವ ಕಾರಣ ಬಹುತೇಕ ಬ್ಲಡ್ ಬ್ಯಾಂಕ್ ಗಳಲ್ಲಿ ರಕ್ತ ದಾಸ್ತಾನು ಇಲ್ಲದಂತಾಗಿದೆ. ಇಂತಹ ಸಂದರ್ಭದಲ್ಲಿ ನಟ ಚಿರಂಜೀವಿ ರಕ್ತದಾನ ಮಾಡಿದ್ದಾರೆ. ಜೊತೆಗೆ ತಮ್ಮ ಅಭಿಮಾನಿಗಳಿಗೂ, ನಾಗರಿಕರಿಗೂ ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.

 

 

ಅಲ್ಲದೆ ಚಿರಂಜೀವಿ ಆಸ್ಪತ್ರೆಯೊಂದರಲ್ಲಿ ರಕ್ತದಾನ ಮಾಡಿದ್ದಾರೆ. ಅವರ ಜೊತೆಗೆ ತೆಲುಗಿನ ಮತ್ತೊಬ್ಬ ಹಿರಿಯ ನಟ ಶ್ರೀಕಾಂತ್ ರವರ ಮಗ ರೋಷನ್ ಸಹ ರಕ್ತದಾನ ಮಾಡಿದ್ದಾರೆ. ಚಿರಂಜೀವಿಯವರು ರಕ್ತದಾನ ಮಾಡಿರುವ ಫೋಟೊವನ್ನ ಟ್ವೀಟ್ ಮಾಡುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೆ ಟ್ವಿಟರ್ ನಲ್ಲಿ ವಿಡಿಯೋವೊಂದನ್ನ ಅಪ್ಲೋಡ್ ಮಾಡುವ ಮೂಲಕ ಅಭಿಮಾನಿಗಳು ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

 

 

 

ಕೋರೊನಾದಿಂದ ರಕ್ತದಾನ ಮಾಡುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದ ಅನೇಕ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸರಿಯಾದ ಸಮಯಕ್ಕೆ ಬ್ಲಡ್ ಸಿಗದೆ ತುಂಬಾ ಕಷ್ಟವಾಗುತ್ತಿದೆ. ಇದರಿಂದ ಅನೇಕರು ಜೀವ ಕೂಡ ಕಳೆದುಕೊಂಡಿದ್ದಾರೆ. ರೋಗಿಗಳಿಗೆ ಆಪರೇಷನ್ ಮಾಡುವಾಗ, ಗರ್ಭಿಣಿಯರಿಗೆ, ಹಾರ್ಟ್ ಪೇಷಂಟ್ ಗೆ, ಕ್ಯಾನ್ಸರ್ ರೋಗಿಗಳಿಗೆ ಹೀಗೆ ಅನೇಕರಿಗೆ ಸಮಯಕ್ಕೆ ಸರಿಯಾಗಿ ಬ್ಲಡ್ ಸಿಗದೆ ತೊಂದರೆ ಪಡುತ್ತಿದ್ದಾರೆ ಎಂದು ಬೇಸರದಿಂದ ಹೇಳಿದರು. ಅಭಿಮಾನಿಗಳು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಿ ಜೀವ ಉಳಿಸಲು ನೆರವಾಗಿ ನಾವು ರಕ್ತದಾನ ಮಾಡಿದಾಗ ಸಿಗುವಂತಹ ಖುಷಿ ಬೇರೆ ಏನು ಮಾಡಿದರು ಸಿಗುವುದಿಲ್ಲ. ಹೀಗಾಗಿ ಎಲ್ಲರೂ ದಯವಿಟ್ಟು ರಕ್ತದಾನ ಮಾಡಿ ಎಂದು ಕೈಮುಗಿದು ಮನವಿ ಮಾಡಿಕೊಂಡರು.

 

 

ರಕ್ತದಾನ ಮಾಡಲು ಹೊರಗೆ ಹೋಗಲು ಪೋಲೀಸರಿಂದ ಸಮಸ್ಯೆಯಾಗುವುದಿಲ್ಲ. ನೀವು ಸಮೀಪದ ಬ್ಲಡ್ ಬ್ಯಾಂಕ್ ಆಸ್ಪತ್ರೆಯನ್ನ ಫೋನ್ ಮೂಲಕ ಸಂಪರ್ಕಿಸಿ ರಕ್ತದಾನ ಮಾಡಲು ಬರುವುದಾಗಿ ಹೇಳಿದರೆ ಆಸ್ಪತ್ರೆಯವರು ನಿಮ್ಮ ಮೊಬೈಲ್ ಗೆ ವಾಟ್ಸಪ್ ಮೂಲಕ ಅನುಮತಿ ಪತ್ರ ಕಳುಹಿಸುತ್ತಾರೆ‌. ಅದನ್ನು ಪೊಲೀಸರಿಗೆ ತೋರಿಸಿ ಆಸ್ಪತ್ರೆಗೆ ಹೋಗಬಹುದು ಅಂತ ತಿಳಿಸಿದರು. ಅಷ್ಟೇ ಅಲ್ಲದೆ ಪೊಲೀಸರು ಸಹ ರಕ್ತದಾನ ಮಾಡಲು ಬೆಂಬಲವಾಗಿ ನಿಂತಿದ್ದಾರೆ.

 

 

ಪೊಲೀಸರು ಕೂಡ ಮೊಬೈಲ್ ನಂಬರ್ ಕೊಟ್ಟಿದ್ದು ಆ ನಂಬರ್ ಗೆ ಫೋನ್ ಮಾಡಿದರೆ ಅವರೇ ಬಂದು ರಕ್ತದಾನ ಮಾಡುವ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಜೊತೆಗೆ ಸುರಕ್ಷಿತವಾಗಿ ವಾಪಸ್ ತಂದು ಮನೆಗೆ ಸೇರಿಸುತ್ತಾರೆ ಅಂತ ಚಿರಂಜೀವಿ ಮಾಹಿತಿ ನೀಡಿದ್ದಾರೆ. ಈಗಾಗಲೇ ಚಿರಂಜೀವಿ ಹೆಸರಿನಲ್ಲಿ ಆಂಧ್ರ, ತೆಲಂಗಾಣದಲ್ಲಿ ಹಲವಾರು ರಕ್ತ ಮತ್ತು ಕಣ್ಣು ಡೊನೇಶನ್ ಕೇಂದ್ರಗಳಿವೆ.

– ಸುಷ್ಮಿತಾ

Advertisement
Share this on...