ಕೋರೊನಾ ತಿಥಿ ಮಾಡಿ, ನೀವು ಅತಿಥಿ ಆಗಬೇಡಿ ಎಂದ ಕ್ರೇಜಿ಼ಸ್ಟಾರ್…!

in ಕನ್ನಡ ಮಾಹಿತಿ 95 views

ಕೋರೊನಾ ವಿರುದ್ಧ ದೇಶದ ಹೋರಾಟಕ್ಕೆ ಎಲ್ಲರೂ ಸಾಥ್ ನೀಡಿ. ಸರ್ಕಾರದ ಆದೇಶಕ್ಕೆ ಸಹಕರಿಸಿ ಮನೆಯಲ್ಲೇ ಇದ್ದು ಸೋಂಕು ಹರಡುವಿಕೆಗೆ ಕಡಿವಾಣ ಹಾಕಿ ಎಂದು ಸ್ಯಾಂಡಲ್ವುಡ್, ಹಾಲಿವುಡ್, ಬಾಲಿವುಡ್ ಸೇರಿದಂತೆ ಅನೇಕ ಸಿನಿಮಾ ಕಲಾವಿದರು ನಟ-ನಟಿಯರು ಜನರಿಗೆ ಕೋರೊನಾ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಆದರೆ ಕೆಲ ಜನರು ಮಾತ್ರ ಯಾರ ಮಾತನ್ನು ಕಿವಿಗೆ ಹಾಕಿಕೊಳ್ಳದೆ, ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳದೇ ಕೋರೊನಾ ಭೀಕರತೆ ಅರಿಯದೆ ಮೂರ್ಖತನ ಪ್ರದರ್ಶಿಸುತ್ತಿದ್ದಾರೆ. ಇದನ್ನ ಕಂಡು ಕ್ರೇಜಿ಼ಸ್ಟಾರ್ ರವಿಚಂದ್ರನ್ ತಮ್ಮದೇ ಶೈಲಿಯಲ್ಲಿ ಜನರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಹಾಗಾದರೆ ಮಲ್ಲನ್ನ ಎಚ್ಚರಿಕೆ ಏನು ಅಂತೀರಾ..?

Advertisement

 

Advertisement

Advertisement

 

Advertisement

ಕೋರೊನಾ ವೈರಸ್ ಮಹಾಮಾರಿ ವಿರುದ್ಧ ಹೋರಾಟದಲ್ಲಿ ನಾವು ಏನು ಮಾಡಬೇಕು ನಮ್ಮ ಜವಾಬ್ದಾರಿಗಳು ಏನು ಎಂದು ಬೆಂಗಳೂರು ಸಿಟಿ ಪೊಲೀಸರು ಸಹಯೋಗದಲ್ಲಿ ಸಿದ್ಧಪಡಿಸಿರುವ ವಿಡಿಯೋದಲ್ಲಿ ರವಿಚಂದ್ರನ್ ತಿಳಿಸಿದ್ದಾರೆ. ಈ ಕೋರೊನಾಗೆ ತಿಥಿ ಮಾಡಬೇಕು ಅಂದರೆ ನೀವು ಮನೆಯಲ್ಲೇ ಇದ್ದು ಸುರಕ್ಷಿತವಾಗಿರಿ ಸುಮ್ಮನೆ ಹೊರಬಂದು ಸೋಂಕಿತರಿಗೆ ಅತಿಥಿಯಾಗಬೇಡಿ ಎಂದು ಮಲ್ಲ ಕಿವಿಮಾತು ಹೇಳಿದ್ದಾರೆ. ವಿಡಿಯೋದಲ್ಲಿ ಕ್ರೇಜಿ಼ಸ್ಟಾರ್ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಕೋರೊನಾ ಬಗ್ಗೆ ಜಾಗೃತಿ ಮೂಡಿಸಿದ್ದಾರೆ. ಅಲ್ಲದೆ ವಿಡಿಯೋದಲ್ಲಿ ನಟ ಮನೋರಂಜನ್ ಮತ್ತು ವಿಕ್ರಂ ಕೂಡ ತಂದೆಗೆ ಸಾಥ್ ನೀಡಿದ್ದಾರೆ. ಕೋರೋನಾಗೆ ಬೆಂಕಿ ಹಚ್ಚಬೇಕು ಅಂದರೆ ನಿಮ್ಮನೆ ದೀಪ ಆರಬಾರದು. ಹೀಗಾಗಿ ನೀವಷ್ಟು ಜನ ಮನೆಯಲ್ಲಿ ಇರಬೇಕು. ದೇವಸ್ಥಾನಗಳೆಲ್ಲವೂ ಮುಚ್ಚಿದೆ ಎಂದರೆ ದೇವರು ಇಲ್ಲ ಅಂತಾನಾ?

 

 

ಡಾಕ್ಟರ್ಸ್ ಗಳಲ್ಲಿ, ನರ್ಸ್ ಗಳಲ್ಲಿ ಪೋಲೀಸರಲ್ಲಿ ಹಾಗೂ ಈ ಸಂದರ್ಭದಲ್ಲಿ ಸೇವೆ ಮಾಡುತ್ತಿರುವ ಪ್ರತಿಯೊಬ್ಬರಲ್ಲಿಯೂ ಆ ದೇವರು ಇದ್ದಾನೆ. ಆ ದೇವರ ಮೇಲೆ ನಿಮಗೆ ನಂಬಿಕೆ ಇದ್ದರೆ ನೀವು ಮಾಡಬೇಕಿರುವುದು ಇಷ್ಟೆ ಅವರಷ್ಟು ಜನಕ್ಕೆ ಒಂದು ಸೆಲ್ಯೂಟ್, ನಮಸ್ಕಾರ, ಒಂದು ಪ್ಲೇನ್ ಕಿಸ್ ಕೊಟ್ಟು ಧನ್ಯಾವಾದ ಹೇಳಿ ಅಂತ ಅಂದಿದ್ದಾರೆ. ಎಷ್ಟು ಜನ್ಮವೆತ್ತಿದ್ದರೂ ನಮ್ಮಗಾಗಿ ಈ ಸಂದರ್ಭದಲ್ಲಿ ಸೇವೆ ಸಲ್ಲಿಸುತ್ತಿರುವವರ ಋಣ ತೀರಿಸಲು ಆಗುವುದಿಲ್ಲ. ಅದನ್ನ ತಿರಿಸಬೇಕು ಅಂತ ನಿಮಗೆ ಅನಿಸಿದರೆ ನೀವು ಮನೆಯಲ್ಲೇ ಇರಿ. ವೈದ್ಯರು, ಪೊಲೀಸರಿಗೆ ಕೊರೋನಾ ವಿರುದ್ಧ ಹೋರಾಡಲು ಬಿಡಿ. ನಿಮ್ಮ ಜೊತೆ ಹೋರಾಡುವುದು ಪೊಲೀಸರ ಕೆಲಸವಲ್ಲ. ಕೋರೊನಾಗೆ ತಿಥಿ ಮಾಡಬೇಕು ಅಂದರೆ ನೀವು ಅದಕ್ಕೆ ಅತಿಥಿಯಾಗಬಾರದು ಮನುಷ್ಯನಿಗೆ ಕಷ್ಟ ಬಂದಾಗಲೇ ಆ ಪರಿಸ್ಥಿತಿಯನ್ನ ಆತ ಹೇಗೆ ನಿಭಾಯಿಸುತ್ತಾನೆ ಎನ್ನುವುದರ ಮೇಲೆ ಆತನ ವ್ಯಕ್ತಿತ್ವ ಗೊತ್ತಾಗುತ್ತದೆ.

 

 

ಅಂತಹದೊಂದು ಪರೀಕ್ಷೆಯ ನಮ್ಮೆಲ್ಲರಿಗೂ ಬಂದಿದೆ. ಈ ಪರೀಕ್ಷೆಯನ್ನ ಪಾಸ್ ಮಾಡಬೇಕು ಅಂದರೆ ನೀವೆಲ್ಲರೂ ಮನೆಯಲ್ಲೇ ಇರಬೇಕು, ಸಾಮಾಜಿಕ ಅಂತರವನ್ನು ಪಾಲಿಸಬೇಕು, ಆದರೆ ಫೇಲ್ ಆಗಬೇಕು ಅಂದರೆ ನಿಮ್ಮಿಷ್ಟ. ನೀವು ಮನೆಯಿಂದ ಹೊರಗೆ ಬನ್ನಿ, ಆಗ ನಿಮಗೆ ನಿಮ್ಮ ಹೆಸರು ಕೂಡ ನೆನಪಿರಲ್ಲ. ಯಾಕೆಂದರೆ ಅದೊಂದು ಪೇಷೆಂಟ್ ನಂಬರ್ ಆಗಿಬಿಡುತ್ತೆ . ನೀವು ಪೇಷೆಂಟ್ ಆಗಲು ಬಯಸಿದ್ದೀರಾ ಅಥವಾ ಮನೆಯಲ್ಲಿ ಪೇಷನ್ಸ್ ಆಗಿ ಇರಲು ಬಯಸಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

 

ವಿಡಿಯೋ ಕೊನೆಯಲ್ಲಿ ಕ್ರೇಜಿ಼ಸ್ಟಾರ್ ಮತ್ತೊಮ್ಮೆ ಡಾಕ್ಟರ್ ಗಳಿಗೆ, ಪೋಲಿಸರಿಗೆ ಅವರ ಕುಟುಂಬದವರಿಗೆ, ಸರ್ಕಾರದವರಿಗೆ ಹಾಗೂ ನಮ್ಮಗಾಗಿ ಸೇವೆ ಸಲ್ಲಿಸುತ್ತಿರುವ ಪ್ರತಿಯೊಬ್ಬರಿಗೂ ನಮ್ಮ ಕಡೆಯಿಂದ ಒಂದು ಸೆಲ್ಯೂಟ್ ಎಂದು ಧನ್ಯವಾದ ತಿಳಿಸಿದ್ದಾರೆ. ಈ ವಿಡಿಯೋವನ್ನ ರವಿಚಂದ್ರನ್ ರವರ ಪುತ್ರ ನಟ ಮನೋರಂಜನ್ ರವರು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ನಾವು ಮನೆಯಲ್ಲೇ ಉಳಿದರೆ ಮಾತ್ರ ಕೋವಿಡ್- 19 ಅರೆಸ್ಟ್ ಆಗಲು ಸಾಧ್ಯ! ನಮ್ಮ ಸುರಕ್ಷತೆ ನಮ್ಮ ಕೈಯಲ್ಲಿದೆ! ಎಂದು ಕ್ಯಾಪ್ಷನ್ ಹಾಕಿ ವಿಡಿಯೋ ಹಾಕಿ ಪೋಸ್ಟ್ ಮಾಡಿದ್ದಾರೆ.

– ಸುಷ್ಮಿತಾ

Advertisement
Share this on...