ಅಣ್ಣಾವ್ರ ಜೀವನದ ಬಗ್ಗೆ ತಿಳಿದುಕೊಳ್ಳಲೇಬೇಕಾದ ಕೆಲವು ಮುಖ್ಯ ಸಂಗತಿಗಳು

in ಸಿನಿಮಾ 52 views

ಡಾ. ರಾಜ್ಕುಮಾರ್ ಅವರ 91ನೇ ಜನ್ಮದಿನಾಚರಣೆಯನ್ನು ನಾಡಿನಾದ್ಯಂತ ಇಂದು ಆಚರಿಸಲಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸೇರಿ ನಾಡಿನ ಹಲವಾರು ಗಣ್ಯರು ರಾಜ್ ಅವರನ್ನು ಸ್ಮರಿಸಿಕೊಂಡಿದ್ದಾರೆ. ಅಂದಹಾಗೆ ನಾವಿಲ್ಲಿ ಡಾ.ರಾಜ್ ಜೀವನದ ಕೆಲವು ಮುಖ್ಯ ಸಂಗತಿಗಳನ್ನು ನಿಮಗೆ ತಿಳಿಸುತ್ತಿದ್ದೇವೆ. ಮೊದಲಿನ ಹೆಸರು ಮುತ್ತುರಾಜ್ ,ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ನಟಿಸುವ ಮುನ್ನ ಡಾ. ರಾಜ್ ಅವರ ಹೆಸರು ಮುತ್ತುರಾಜ ಎಂದಿತ್ತು. ನಿರ್ದೇಶಕ ಎಚ್.ಎಲ್.ಎನ್.ಸಿಂಹ ಅವರಿಂದ ಮುತ್ತುರಾಜ್ಗೆ-ರಾಜಕುಮಾರ್ ಎಂಬ ಹೊಸ ಹೆಸರಿನ ನಾಮಕರಣವಾಯಿತು. ಓದಿದ್ದು ನಾಲ್ಕನೆ ತರಗತಿಯವರಗೆ.ರಾಜ್ ಕುಮಾರ್ ಅವರ ತಂದೆ ಸಿಂಗಾನಲ್ಲೂರು ಪುಟ್ಟಸ್ವಾಮಿ ಗೌಡ ರವರು ಕನ್ನಡ ರಂಗಭೂಮಿಯಲ್ಲಿ ದೊಡ್ಡ ಹೆಸರು ಮಾಡಿದವರು. ರೌದ್ರ ಪಾತ್ರಗಳಿಗೆ ಹೆಸರಾಗಿದ್ದ ಪುಟ್ಟಸ್ವಾಮಿ ಗೌಡರವರು ಗುಬ್ಬಿ ಕಂಪನಿಯಲ್ಲಿ ಕಲಾವಿದರಾಗಿದ್ದರು. ಬಡತನದಿಂದಾಗಿ ರಾಜ್ ಕುಮಾರ್ ವಿದ್ಯಾಭ್ಯಾಸ ನಾಲ್ಕನೆ ತರಗತಿಗೆ ನಿಂತಿತು.

Advertisement

 

Advertisement

 

Advertisement

Advertisement

200 ಚಿತ್ರಗಳಲ್ಲಿ ನಾಯಕನಾಗಿ ನಟನೆ
ಬೇಡರ ಕಣ್ಣಪ್ಪ ಚಿತ್ರದಿಂದ ನಾಯಕ ನಟನಾಗಿ ಅಭಿನಯಿಸಲು ಪ್ರಾರಂಭಿಸಿದ ರಾಜಕುಮಾರ್, ಭಕ್ತ ವಿಜಯ, ಹರಿಭಕ್ತ, ಓಹಿಲೇಶ್ವರ, ಭೂಕೈಲಾಸ, ಭಕ್ತ ಕನಕದಾಸ, ನವಕೋಟಿ ನಾರಾಯಣ(ಭಕ್ತ ಪುರಂದರದಾಸ) ಮುಂತಾದ ಭಕ್ತಿ ಪ್ರಧಾನ ಚಿತ್ರಗಳಲ್ಲಿ ಅಭಿನಯಿಸಿದರು. 200 ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿದ ಕನ್ನಡದ ಏಕೈಕ ಕಲಾವಿದ ಡಾ.ರಾಜ್ ಕುಮಾರ್.
ದಾಖಲೆ ನಿರ್ಮಿಸಿದ ಬಂಗಾರದ ಮನುಷ್ಯ
1971 ರಲ್ಲಿ ತೆರೆಕಂಡ ಬಂಗಾರದ ಮನುಷ್ಯ ಚಿತ್ರಮಂದಿರದಲ್ಲಿ ಸತತವಾಗಿ ಎರಡು ವರ್ಷಕ್ಕೂ ಹೆಚ್ಚಿನ ಅವಧಿಯ ಪ್ರದರ್ಶನಗೊಂಡು ಹೊಸ ದಾಖಲೆಯನ್ನು ನಿರ್ಮಿಸಿತು. ಈ ದಾಖಲೆ ಕನ್ನಡ ಚಿತ್ರರಂಗದಲ್ಲಿ ಇಂದಿಗೂ ಅಚ್ಚಳಿಯದೇ ನಿಂತಿದೆ. ಈ ಚಿತ್ರದಲ್ಲಿನ ರಾಜ್ ಅಭಿನಯದ ರಾಜೀವಪ್ಪ ಎಂಬ ಪಾತ್ರವು ಕನ್ನಡ ಚಿತ್ರರಂಗದಲ್ಲಿನ ಅತ್ಯಂತ ಖ್ಯಾತ ಪಾತ್ರಗಳಲ್ಲಿ ಒಂದಾಗಿ ಹೆಸರು ಪಡೆಯಿತು.

 

ಜನಪ್ರಿಯ ಜೋಡಿ
ಡಾ. ರಾಜ್ ಕುಮಾರ್ ಅವರು ಅಂದಿನ ಬಹುತೇಕ ಎಲ್ಲ ಜನಪ್ರಿಯ ನಾಯಕಿಯರೊಂದಿಗೆ ನಟಿಸಿದ್ದಾರೆ. ಆದರೆ ರಾಜ್-ಭಾರತಿ, ರಾಜ್-ಲೀಲಾವತಿ, ರಾಜ್-ಜಯಂತಿ, ರಾಜ್-ಕಲ್ಪನಾ ಜೋಡಿ ಆ ಕಾಲದಲ್ಲಿ ಅತ್ಯಂತ ಜನಪ್ರಿಯ ಜೋಡಿಯಾಗಿತ್ತು.ಈ ಆಸೆ ಕೈಗೂಡಲಿಲ್ಲ
ಭಕ್ತ ಅಂಬರೀಶ ಎಂಬ ಚಿತ್ರದಲ್ಲಿ ನಟಿಸಬೇಕೆಂಬ ಹಂಬಲವನ್ನು ಡಾ. ರಾಜ್ ಹಲವಾರು ಬಾರಿ ವ್ಯಕ್ತಪಡಿಸಿದ್ದರಾದರೂ ಅನಾರೋಗ್ಯದ ಕಾರಣ ಅದು ಸಾಧ್ಯವಾಗಲಿಲ್ಲ. ಬೆಳ್ಳಿತೆರೆಯ ಮೇಲೆ ಡಾ. ರಾಜ್ ಅವರು ಕಡೆಯದಾಗಿ ಕಾಣಿಸಿಕೊಂಡ ಚಿತ್ರ ತಮ್ಮ ಪುತ್ರ ಶಿವರಾಜ್ಕುಮಾರ್ ನಾಯಕತ್ವದಲ್ಲಿನ ಜೋಗಿ. ಚಿತ್ರದ ಆರಂಭದ ದೃಶ್ಯದಲ್ಲಿ ನಾಯಕನ ಜೋಳಿಗೆಗೆ ಅಕ್ಕಿಯನ್ನು ಅರ್ಪಿಸಿ, ಆಶೀರ್ವದಿಸುತ್ತಾರೆ.

Advertisement
Share this on...