ಇಡೀ ದೇಶದಲ್ಲಿ ಕಣ್ಣೀರು ಹಾಕಿದ ಮೊದಲ ಮುಖ್ಯಮಂತ್ರಿ ನಾನೇ, ಅಂಥಾ ವಾತಾವರಣದಲ್ಲಿ ನಾನಿದ್ದೆ..!: ಹೆಚ್ ಡಿಕೆ - Namma Kannada Suddi

ಇಡೀ ದೇಶದಲ್ಲಿ ಕಣ್ಣೀರು ಹಾಕಿದ ಮೊದಲ ಮುಖ್ಯಮಂತ್ರಿ ನಾನೇ, ಅಂಥಾ ವಾತಾವರಣದಲ್ಲಿ ನಾನಿದ್ದೆ..!: ಹೆಚ್ ಡಿಕೆ

in News/ರಾಜಕೀಯ 165 views

ಬೆಂಗಳೂರು: ಇಡೀ ದೇಶದಲ್ಲೇ ಸಾರ್ವಜನಿಕವಾಗಿ ಒಬ್ಬ ಮುಖ್ಯಮಂತ್ರಿ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ. ಅಂತಹ ವಾತಾವರಣದಲ್ಲಿ ನಾನಿದ್ದೆ ಎಂದು ಹೆಚ್ ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.ಮೈತ್ರಿ ಸರ್ಕಾರ ಮುಗಿದು ವರ್ಷಗಳೇ ಬರ್ದಿದೆ. ಇದೀಗ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಳೆಯ ಘಟನೆಗಳನ್ನು ನೆನೆದು ಬೇಸರ ವ್ಯಕ್ತಪಡಿಸಿದ್ದಾರೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಗ್ಗೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ದೇವೇಗೌಡರ ಕುಟುಂಬವನ್ನು ದುಡ್ಡು ಕೊಟ್ಟು ಕೊಂಡುಕೊಳ್ಳಲು ಆಗುವುದಿಲ್ಲ. ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಒಬ್ಬ ಮುಖ್ಯಮಂತ್ರಿ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ. ಅಂತಹ ವಾತಾವರಣದಲ್ಲಿ ನಾನಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು.

Advertisement

“ಜೆಡಿಎಸ್ ಮುಗಿಸುವುದೇ ಕಾಂಗ್ರೆಸ್ ಅಜೆಂಡಾ”

Advertisement

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Advertisement

Advertisement

“ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಜನರಿಗೆ ಫುಡ್‌ಕಿಟ್‌ ನೀಡಿದ್ರು”

ಬಿಜೆಪಿ ಹಾಗೂ ಬಿಜೆಪಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್‌ಕಾರ್ನರ್‌ ಹೊಂದಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಜನರ ಹಣ ಲೂಟಿ ಹೊಡೆಯೋರ ಬಗ್ಗೆ ನಾನು ಮಾತಾಡಲ್ಲ. 250 ಕೋಟಿ ರೂ. ಕಳ್ಳ ಬಿಲ್ ಮಾಡಿ ಹಣ ಗುಳುಂ ಮಾಡಿದ್ದಾರೆ. ಬೆವರು ಸುರಿಸಿ ದುಡಿದ ಹಣದಲ್ಲಿ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಕೊರೊನಾ ಸಮಯದಲ್ಲಿ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ, ಜನರಿಗೆ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಫುಡ್‌ಕಿಟ್‌ ನೀಡಿದ್ದಾರೆ ಎಂದು ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ಸರಕಾರವನ್ನು 10 ಪರ್ಸೆಂಟ್‌ ಸರಕಾರ ಎಂದು ಯಾರೂ ಹೇಳಲಿಲ್ಲ. ನಾನು ಅಧಿಕಾರದಲ್ಲಿದ್ದಾಗ ಜನರಿಗೆ ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಪ್ರಧಾನಿ ಮೋದಿ ನಮ್ಮ ಮುಖ್ಯಮಂತ್ರಿ ಜೊತೆ ಮಾತನಾಡಲು ಸಮಯ ನೀಡುತ್ತಿಲ್ಲ. ಈ ರೀತಿ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅವಮಾನ ಮಾಡುತ್ತಿವೆ. ಕನ್ನಡಿಗರ ಸ್ವಾಭಿಮಾನ, ಗೌರವ ಉಳಿಸಲು ಈ ಚುನಾವಣೆ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಉತ್ತರ ನೀಡಿ ಎಂದು ತಿಳಿಸಿದರು.

“ದಿನಕ್ಕೆ ಮೂರ್ ನಾಲಕ್ಕು ಡ್ರೆಸ್ ಹಾಕಿಕೊಳ್ಳೋದೇ ಮೋದಿ ಸಾಧನೆ”
ಆರು ವರ್ಷದಲ್ಲಿ ಪ್ರಧಾನಿ ಮೋದಿ ಅವರಿಂದ ದೇಶ ಚೀನಾ ವಿರುದ್ಧ ಸ್ಪರ್ಧೆ ಮಾಡುವುದು ಇರಲಿ. ಬಾಂಗ್ಲಾದೇಶದ ಜೊತೆ ಸ್ಪರ್ಧೆ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ದಿನಕ್ಕೆ ಮೂರು ನಾಲ್ಕು ಡ್ರೆಸ್‌ ಹಾಕಿಕೊಂಡು ಚೆನ್ನಾಗಿ ಕಾಣುವುದೇ ಮೋದಿ ಅವರ ಸಾಧನೆಯಾಗಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ಇಲ್ಲಿ ಕೃಷ್ಣಮೂರ್ತಿ ಅಭ್ಯರ್ಥಿಯಲ್ಲ, ಕಾರ್ಯಕರ್ತರೇ ಅಭ್ಯರ್ಥಿಗಳು ಎಂದು ತಿಳಿದು ಜೆಡಿಎಸ್‌ ಸಮಾಧಿ ಮಾಡುತ್ತೇವೆ ಎಂದವರಿಗೆ ಉತ್ತರ ನೀಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

“ದುಶ್ಯಾಸನನ ರೀತಿ ಕಾರ್ಪೋರೇಟರ್ ಸೀರೆ ಎಳೆದಿದ್ದೆ ಮುನಿರತ್ನ “

ಮಾಜಿ ಪರಿಷತ್‌ ಸದಸ್ಯ ಟಿ.ಎ.ಶರವಣ್‌ ಮಾತನಾಡಿ, ಬಿಜೆಪಿ ಅಭ್ಯರ್ಥಿ ಮುನಿರತ್ನ ಅಲ್ಲ, ‘ಮನಿ’ರತ್ನ ಆಗಿದ್ದಾರೆ. ದುಶ್ಯಾಸನಂತೆ ಕಾರ್ಪೊರೇಟರ್ ಸೀರೆ ಎಳೆದಿದ್ದ ಮುನಿರತ್ನ ಈಗ ಧರ್ಮರಾಯನಂತೆ ಕಾಣುತ್ತಿದ್ದಾರಾ ಎಂದು ಬಿಜೆಪಿ ಅಭ್ಯರ್ಥಿ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರು ಜೆಡಿಎಸ್‌ ಎಲ್ಲಿದೆ ಎಂದು ಪ್ರಶ್ನಿಸುತ್ತಾರೆ. ಜೆಡಿಎಸ್ ಎಲ್ಲಿದೆ ಎಂದು ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತೋರಿಸಿದ್ದೇವೆ. ಎಷ್ಟು ಬಾರಿ ನಿಮಗೆ ಜೆಡಿಎಸ್ ಎಲ್ಲಿದೆ ಎಂದು ತೋರಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

Advertisement
Share this on...

Latest from News

ಸೂಜಿ ಚುಚ್ಚುವಾಗ ಮುಖ ಮುಚ್ಚಿಕೊಂಡ ಸ್ಯಾಂಡಲ್​ವುಡ್ ನಿರ್ದೇಶಕ…ಭಯಾನಾ ಅಥವಾ ನರ್ಸ್ ನೋಡಿ ನಾಚಿಕೇನಾ ಅಂತಿದ್ದಾರೆ ನೆಟಿಜನ್ಸ್​​​​​​​​

ಕೊರೊನಾವನ್ನು ಸಂಪೂರ್ಣ ತಡೆಗಟ್ಟಲು 2ಡಿಜಿ ಔಷಧ ರಾಮಬಾಣ ಎಂದು ಹೇಳಲಾಗುತ್ತಿದ್ದರೂ ಸದ್ಯಕ್ಕೆ ಇದು ಜನರಿಗೆ ಸುಲಭವಾಗಿ…

Go to Top