ಲಾಕ್ ಡೌನ್ ನಲ್ಲಿ ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡುತ್ತಿರುವ ನಟಿ ಯಾರು ಗೊತ್ತಾ?

in ಮನರಂಜನೆ 191 views

ಕೋರೋನಾ ಲಾಕ್ ಡೌನ್ ಸಮಯವನ್ನ ಕೆಲವು ನಟ-ನಟಿಯರು ತಮ್ಮ ಕುಟುಂಬದ ಜೊತೆಗೆ ಕಾಲ ಕಳೆಯುತ್ತಿದ್ದಾರೆ. ಕೆಲವರು ಸಾಮಾಜಿಕ ಜಾಲತಾಣದಲ್ಲಿ ಲಾಕ್ ಡೌನ್ ನಲ್ಲಿ ಏನು ಮಾಡುತ್ತಿದ್ದೀವಿ ಅಂತ ಶೇರ್ ಮಾಡ್ತಾ ಅಭಿಮಾನಿಗಳಿಗೆ ಅಪ್ಡೇಟ್ ಕೊಡುತ್ತಿದ್ದಾರೆ. ಆದರೆ ನಟಿಯೊಬ್ಬರು ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡುವುದರಲ್ಲಿ ಬಿಜಿ಼ಯಾಗಿದ್ದಾರೆ. ಯಾರದು ನಟಿ? ಏನಪ್ಪಾ ಈ ಮ್ಯಾಟರ್ ಅಂತೀರಾ?

Advertisement

 

Advertisement

Advertisement

 

Advertisement

ತಮಿಳು ನಟಿ ಕೀರ್ತಿ ಪಾಂಡಿಯನ್ ಟ್ರ್ಯಾಕ್ಟರ್ ಓಡಿಸುತ್ತಾ ಹೊಲ ಉಳುಮೆ ಮಾಡುತ್ತಾ ತಮ್ಮ ಲಾಕ್ ಡೌನ್ ಅವಧಿಯನ್ನ ಎಂಜಾಯ್ ಮಾಡುತ್ತಿದ್ದಾರೆ. ಹೊಲದಲ್ಲಿ ಕೆಲಸ ಮಾಡುತ್ತಾ ಲಾಕ್ ಡೌನ್ ಸಮಯ ಕಳೆಯುತ್ತಿರುವ ನಟಿ ಈ ಬಗ್ಗೆ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

 

 

ಪೋಸ್ಟ್ ಗೆ ಮತ್ತೆ ಕೃಷಿಯನ್ನ ಪ್ರಾರಂಭಿಸಿದ್ದೇನೆ ಎಂದು ಕ್ಯಾಪ್ಷನ್ ಜೊತೆಗೆ ಕ್ವಾರೆಂಟೈನ್ ಫಾರ್ಮಿಂಗ್ ಎಂದು ಹ್ಯಾಶ್ ಟ್ಯಾಗ್ ಹಾಕಿ ಟ್ವಿಟರ್ ಇನ್ಸ್ಟಾಗ್ರಾಂ ನಲ್ಲಿ ಶೇರ್ ಮಾಡಿದ್ದಾರೆ. ಮಲೆಯಾಳಂನಿಂದ ತಮಿಳಿಗೆ ರಿಮೇಕ್ ಆಗುತ್ತಿರುವ ‘ಹೆಲೆನ್’ ಸಿನಿಮಾದಲ್ಲಿ ಕೀರ್ತಿ ಪಾಂಡಿಯನ್ ಸದ್ಯ ನಟಿಸುತ್ತಿದ್ದಾರೆ.

 

 

View this post on Instagram

 

Sometime last year at @provoke_lifestyle awards! ✨ #smileaway ? @raamframes

A post shared by Keerthi Pandian (@keerthipandian) on

 

ಕೀರ್ತಿ ತಂದೆ ಅರುಣ್ ಪಾಂಡಿಯನ್ ಕೂಡ ನಟರಾಗಿದ್ದು ಸಾಕಷ್ಟು ತಮಿಳು ಸಿನಿಮಾದಲ್ಲಿ ನಟಿಸಿದ್ದಾರೆ. ತಮಿಳು ಮಾತ್ರವಲ್ಲದೆ ಕನ್ನಡ-ತೆಲುಗು ಸಿನಿಮಾಗಳಲ್ಲೂ ಕೂಡ ನಟಿಸಿ ಬೇಷ್ ಅನಿಸಿಕೊಂಡಿದ್ದಾರೆ. ಹಲವು ಚಿತ್ರಗಳನ್ನ ನಿರ್ಮಾಣ ಕೂಡ ಮಾಡಿದ್ದಾರೆ.

 

 

ಕೀರ್ತಿಯವರು ಪಕ್ಕ ಹಳ್ಳಿ ಹುಡುಗಿಯಂತೆ ಟ್ರ್ಯಾಕ್ಟರ್ ಹತ್ತಿ ಹೊಲ ಉಳುಮೆ ಮಾಡುತ್ತಿರುವ ವಿಡಿಯೋ ನೋಡಿದ ಅಭಿಮಾನಿಗಳು ಫಿದಾ ಆಗಿದ್ದು ಕೀರ್ತಿಯವರ ಹಳ್ಳಿ ಹುಡುಗಿ ಅವತಾರಕ್ಕೆ ಮನಸೋತಿದ್ದಾರೆ.

– ಸುಷ್ಮಿತಾ

Advertisement
Share this on...