ಯಶ್ ಅಭಿಮಾನಿಗಳಿಗೆ ನಿರಾಸೆ…! ಕಾರಣ ಇಲ್ಲಿದೆ ನೋಡಿ…

in ಸಿನಿಮಾ 18 views

ಕೆಜಿಎಫ್ 2 ಚಿತ್ರದ ಟೀಸರ್ ಬಿಡುಗಡೆಯಾಗುತ್ತೆ ಎಂಬ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಕೆಜಿಎಫ್ 2 ಚಿತ್ರತಂಡ ನಿರಾಸೆ ಮೂಡಿಸಿದೆ. ಇಡೀ ಭಾರತ ಚಿತ್ರರಂಗವೇ ಕೆಜಿಎಫ್-2 ಚಿತ್ರದ ಬಿಡುಗಡೆಯ ಕಡೆ ನೋಡುತ್ತಿದೆ. ಕೆಜಿಎಫ್-1 ಭರ್ಜರಿ ಯಶಸ್ಸಿನ ನಂತರ ಯಶ್ ಕೆಜಿಎಫ್ 2 ಚಿತ್ರವನ್ನು ಮಾಡುತ್ತಿದ್ದಾರೆ. ಈಗಾಗಲೇ ಚಿತ್ರತಂಡ ಸಿನಿಮಾ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದೆ.

Advertisement

 

Advertisement

Advertisement

 

Advertisement

ಆದರೆ ಇಲ್ಲಿಯವರೆಗೂ ಚಿತ್ರ ಕೆಲ ಪೋಸ್ಟರ್ ಗಳನ್ನ ಮಾತ್ರ ಬಿಡುಗಡೆ ಮಾಡಿದ್ದು ಚಿತ್ರದ ಟೀಸರ್ ನೋಡಲು ಯಶ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ವಿಚಾರವಾಗಿ ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಟೀಸರ್ ಬಿಡುಗಡೆ ಮಾಡುವಂತೆ ಬೇಡಿಕೆ ಇಡುತ್ತಿದ್ದಾರೆ. ಪ್ರೀತಿಯ ಯಶ್ ಮತ್ತು ಹೊಂಬಾಳೆ ಫಿಲಂಸ್ ರವರೇ ನಾವು ನಿಮ್ಮ ಅಪ್ಪಟ ಅಭಿಮಾನಿಗಳಾಗಿದ್ದು ಕೆಜಿಎಫ್-2 ಚಿತ್ರದ ಟೀಸರ್ ಗಾಗಿ ಬಹಳ ತಿಂಗಳುಗಳಿಂದ ಕಾಯುತ್ತಿದ್ದೇವೆ. ದಯವಿಟ್ಟು ಸಿನಿಮಾದ ಟೀಸರ್ ಬಿಡುಗಡೆಯ ದಿನಾಂಕವನ್ನು ಘೋಷಿಸಿ ಅಭಿಮಾನಿಗಳ ಆಸೆಯನ್ನು ಈಡೇರಿಸಿ ಎಂದು ಟ್ವೀಟ್ ಮಾಡುವ ಮೂಲಕ ಕೇಳಿಕೊಳ್ಳುತ್ತಿದ್ದಾರೆ.

 

 

ಅಭಿಮಾನಿಗಳ ಟ್ವೀಟ್ ಗೆ ಉತ್ತರಿಸಿರುವ ಹೊಂಬಾಳೆ ಸಂಸ್ಥೆಯ ಕಾರ್ತಿಕ್ ಗೌಡ ಕೆಜಿಎಫ್ 2 ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗುವುದಿಲ್ಲ ಚಿತ್ರದ ಬಿಡುಗಡೆಯ ವೇಳೆಗೆ ಟೀಸರ್ ಮತ್ತು ಟ್ರೈಲರ್ ಅನ್ನು ಬಿಡುಗಡೆ ಮಾಡುತ್ತೇವೆ. ಸದ್ಯಕ್ಕೆ ಈಗ ಮನೆಯಲ್ಲೇ ಇರಿ, ಸೇಫ್ ಆಗಿರಿ ಮುಂದೆ ನೋಡೋಣ ಎಂದು ಟ್ವೀಟ್ ಮಾಡಿದ್ದಾರೆ. ಸತತ 2 ವರ್ಷದಿಂದ ಕೆಜಿಎಫ್ 2 ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ ಚಿತ್ರದ ಬಹುತೇಕ ಶೂಟಿಂಗ್ ಮುಗಿದಿದ್ದು ಚಿತ್ರತಂಡ ಅಕ್ಟೋಬರ್ 23 ರಂದು ಸಿನಿಮಾವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ಘೋಷಿಸಿದೆ.

 

 

ಈ ನಡುವೆ ಯಶ್ ಹುಟ್ಟುಹಬ್ಬದಂದೇ ಬಿಡುಗಡೆಯಾಗಬೇಕಿದ್ದ ಟೀಸರ್ ಇಷ್ಟು ದಿನ ಕಳೆದರೂ ಬಿಡುಗಡೆಯಾಗಿಲ್ಲ. ಆದ್ದರಿಂದ ಬೇಸರಗೊಂಡ ಯಶ್ ಅಭಿಮಾನಿಗಳು ಟ್ವಿಟರ್ ನಲ್ಲಿ ಟೀಸರ್ ಬಿಡುಗಡೆ ಮಾಡುವಂತೆ ಕೇಳಿಕೊಳ್ಳುತ್ತಿದ್ದಾರೆ.

 

 

ಭಾರತ ಚಿತ್ರರಂಗದಲ್ಲೇ ಒಂದು ಹೊಸ ಟ್ರೆಂಡ್ ಸೆಟ್ ಮಾಡಿರುವ ಕೆಜಿಎಫ್ 2 ಚಿತ್ರಕ್ಕಾಗಿ ಇಡೀ ದೇಶವೇ ಕಾಯುತ್ತಿದೆ. ಈ ಚಿತ್ರದಲ್ಲಿ ಭಾರತ ಚಿತ್ರರಂಗದ ಘಟಾನುಘಟಿ ಕಲಾವಿದರು ಅಭಿನಯಿಸುತ್ತಿದ್ದಾರೆ. ಈಗಾಗಲೇ ಅಧೀರನ ಪಾತ್ರದಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಂಜಯ್ ದತ್, ಪ್ರಧಾನಿ ರಮಿಕಾ ಸೆನ್ ಪಾತ್ರದಲ್ಲಿ ರವೀನಾ ತಂಡನ್ ನಟಿಸಿದ್ದಾರೆ. ಹೀಗಾಗಿ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಾಗಿದೆ.

– ಸುಷ್ಮಿತಾ

Advertisement
Share this on...