ತಮ್ಮ ವೈಪಲ್ಯ ಮುಚ್ಚಿಕೊಳ್ಳಲು ಮೋದಿ ಭಾಷಣ: ಹಣ ಹಂಚಿಕೆ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದ ವಿಪಕ್ಷ ನಾಯಕ - Namma Kannada Suddi
siddaramaiah modi

ತಮ್ಮ ವೈಪಲ್ಯ ಮುಚ್ಚಿಕೊಳ್ಳಲು ಮೋದಿ ಭಾಷಣ: ಹಣ ಹಂಚಿಕೆ ಬಗ್ಗೆ ಪ್ರಶ್ನೆಗಳ ಸುರಿಮಳೆಗೈದ ವಿಪಕ್ಷ ನಾಯಕ

in ರಾಜಕೀಯ 116 views

ಬೆಂಗಳೂರು: ಕೊರೊನಾ ಪರಿಹಾರದ ಇಪ್ಪತ್ತು ಲಕ್ಷ ಕೋಟಿ ರೂ. ಪ್ಯಾಕೇಜ್ ಏನಾಯಿತು? ಯಾರಿಗೆ? ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪ್ರಶ್ನೆ ಹಾಕಿದ್ದಾರೆ. ದೇಶವನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಮೋದಿ ಭಾಷಣದ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿ ವಾಗ್ದಾಳಿ ನಡೆಸಿದ ಅವರು,ರೋಗವನ್ನು ವೈಜ್ಞಾನಿಕವಾಗಿ ಎದುರಿಸಲು ಕರೆನೀಡಬೇಕಾದ ಪ್ರಧಾನಿ, ಟಿವಿ ಜ್ಯೋತಿಷಿಗಳ ರೀತಿಯಲ್ಲಿ ಪ್ರವಚನನೀಡಿದರೆ ಜನ ಮೂಢಮತಿಗಳಾಗದೆ ಇನ್ನೇನು ಆಗಲು ಸಾಧ್ಯ? ದೇಶದ ಜನತೆಗೆ ಕರ್ತವ್ಯಪಾಲನೆಯ ಪ್ರವಚನ ನೀಡಿದ ಪ್ರಧಾನಿಗಳು ಅದರ ಜೊತೆಗೆ ಕೊರೊನಾ ಪರಿಹಾರದ ಇಪ್ಪತ್ತು ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜ್ ಏನಾಯಿತು? ಯಾರಿಗೆ? ಎಷ್ಟು ತಲುಪಿದೆ? ಪಿ.ಎಂ. ಕೇರ್ಸ್ ನಿಧಿಗೆ ಬಂದ ದುಡ್ಡೆಷ್ಟು? ಕೊರೊನಾ ನಿಯಂತ್ರಣ ಮತ್ತು ಪರಿಹಾರಕ್ಕಾಗಿ ಆ ನಿಧಿಯಿಂದ ಬಳಕೆಯಾದ ದುಡ್ಡಿನ ಮೊತ್ತವೆಷ್ಟು? ಎಂಬುದನ್ನೂ ತಿಳಿಸಬೇಕಿತ್ತು ಎಂದು ಪ್ರಶ್ನೆ ಹಾಕಿದರು.

Advertisement

Advertisement

ಕೊರೊನಾ ಸೋಂಕು ಪ್ರಾರಂಭಗೊಂಡಾಗ ಪ್ರಧಾನಿಯವರು ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಜೂನ್ ನಲ್ಲಿ ಪ್ರಕಟಿಸಿದ್ದರು.ಅದು ಎಷ್ಟು ಜನರಿಗೆ ತಲುಪಿದೆ? ರಾಜ್ಯದ ಬಿಜೆಪಿ ಸರ್ಕಾರ ಅನ್ನಭಾಗ್ಯದಲ್ಲಿ ನೀಡಲಾಗುತ್ತಿದ್ದ ಅಕ್ಕಿಯನ್ನು ಹತ್ತರಿಂದ ಏಳು ಕಿಲೋಗೆ ಇಳಿಸಿದೆ, ಇಂದಿರಾ ಕ್ಯಾಂಟೀನ್ ಗಳನ್ನು ಮುಚ್ಚಲು ಹೊರಟಿದೆ. ಮಿತವ್ಯಯ ಪಾಲನೆ ಮಾಡಿ ಲಭ್ಯ ಇರುವ ಸಂಪನ್ಮೂಲವನ್ನು ಕೊರೊನಾ ನಿಯಂತ್ರಣಕ್ಕಾಗಿ ಬಳಸಬೇಕಾದ ರಾಜ್ಯದ ಬಿಜೆಪಿ ಸರ್ಕಾರ ಕೊರೊನಾ ಕಾಯಿಲೆಯ ಪರಿಹಾರದ ನೆಪದಲ್ಲಿ ಜನರ ತೆರಿಗೆ ಹಣವನ್ನು ಲೂಟಿ ಮಾಡುತ್ತಿದೆ. ಇದೇನಾದರೂ ಪ್ರಧಾನಿಯವರ ಗಮನಕ್ಕೆ ಬಂದಿದೆಯೇ? ಎಂದು
ಟೀಕೆ ಮಾಡಿದರು.

Advertisement

ಜನತೆಗೆ ಕರ್ತವ್ಯಪಾಲನೆಯ ಪಾಠ ಮಾಡುವ ಮೊದಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತನ್ನ ಕರ್ತವ್ಯಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿತ್ತು. ಕೊರೊನಾ ಸೋಂಕಿನ ನಿಯಂತ್ರಣ ಮತ್ತು ಅದರಿಂದಾಗಿ ಕಷ್ಟ-ನಷ್ಟಕ್ಕೀಡಾಗಿರುವ ಜನತೆಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಏನು ಮಾಡಿದೆ ಮತ್ತು ಮುಂದಿನ ದಿನಗಳಲ್ಲಿ ಏನು ಮಾಡಲಿದೆ ಎನ್ನುವುದನ್ನು ದೇಶದ ಜನತೆಗೆ ತಿಳಿಸಬೇಕಾಗಿತ್ತು

Advertisement

ದೇಶದ ಜನತೆಗೆ ಬುದ್ದಿವಾದ ಹೇಳುವ ಮೂಲಕ ಪ್ರಧಾನಿಯವರು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ಹತಾಶ ಪ್ರಯತ್ನವನ್ನಷ್ಟೇ ಮಾಡಿದ್ದಾರೆ. ಕೊರೊನಾ ಸೋಂಕು ಉಲ್ಬಣಕ್ಕೆ ಜನರ ನಿರ್ಲಕ್ಷಕ್ಕಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹೊಣೆಗೇಡಿತನವೂ ಕಾರಣ ಎನ್ನುವುದನ್ನು ಪ್ರಧಾನಿಯವರು ಒಪ್ಪಿಕೊಂಡು ದೇಶದ ಜನತೆಯಲ್ಲಿ ಕ್ಷಮೆಯಾಚಿಸಬೇಕಾಗಿತ್ತು. ಜಾಗಟೆ ಬಾರಿಸಿ, ದೀಪ ಹಚ್ಚಿ ಕೊರೊನಾ ಎದುರಿಸಲು ಕರೆನೀಡಿದ ಪ್ರಧಾನ ಮಂತ್ರಿಯವರ ಮೂಢತನದ ಭಾಷಣಗಳೇ ಕೊರೊನಾ ಸೋಂಕಿನ ಬಗ್ಗೆ ಜನರ ನಿರ್ಲಕ್ಷಕ್ಕೆ ಮುಖ್ಯ ಕಾರಣ ಎಂದು ವಾಗ್ದಾಳಿ ನಡೆಸಿದರು.

Advertisement
Share this on...

Latest from ರಾಜಕೀಯ

ಅಭಿಮಾನಿ ತಮ್ಮನ್ನು ಬೀಳಿಸಿದರೂ ಕೋಪಗೊಳ್ಳದ ಪವನ್ ಕಲ್ಯಾಣ್…ನಿಮ್ಮ ಸಹನೆಗೆ ಹ್ಯಾಟ್ಸಾಫ್ ಎಂದ ನೆಟಿಜನ್ಸ್​​​​​​..ವಿಡಿಯೋ

ಪವನ್ ಕಲ್ಯಾಣ್, ಆಂಧ್ರ ಹಾಗೂ ತೆಲಂಗಾಣದಲ್ಲಿ ಪವರ್ ಸ್ಟಾರ್ ಎಂದೇ ಫೇಮಸ್. ನಟನಾಗಿ, ರಾಜಕೀಯ ನಾಯಕನಾಗಿ…

ತಮಿಳುನಾಡು ಸಿಎಂ ಭೇಟಿ ಮಾಡಿದ ಶಿವರಾಜ್​​ ಕುಮಾರ್ ದಂಪತಿ….ಭೇಟಿ ಬಗ್ಗೆ ಶಿವಣ್ಣ ಹೇಳಿದ್ದೇನು..?

ಬ್ಯುಸಿ ಶೆಡ್ಯೂಲ್ ನಡುವೆಯೂ ನಟ ಶಿವರಾಜ್ ಕುಮಾರ್ ಇತ್ತೀಚೆಗೆ ಮೈಸೂರಿನಿಂದ ಶಕ್ತಿಧಾಮದ ಮಕ್ಕಳನ್ನು ಬೆಂಗಳೂರಿಗೆ ಕರೆತಂದು…

ನನ್ನ ಕೆನ್ನೆಗಳನ್ನು ಇನ್ಮುಂದೆ ಜೋಪಾನವಾಗಿರಿಸಿಕೊಳ್ಳಬೇಕು…ಸಂಸದೆ ಹೇಮಾ ಮಾಲಿನಿ ಹೀಗೆ ಹೇಳಿದ್ದೇಕೆ…?

ರಾಜಕೀಯ ಮುಖಂಡರು ಕೆಲವೊಮ್ಮೆ ತಿಳಿದೋ, ತಿಳಿಯದೆಯೋ ನೀಡುವ ಕೆಲವೊಂದು ಹೇಳಿಕೆಗಳು ಇತರರ ಬೇಸರಕ್ಕೆ ಕಾರಣವಾಗುತ್ತದೆ. ಈ…

ಪಾಲಿಟಿಕ್ಸ್​​​​ ಬೇಡ ಎನ್ನುತ್ತಿದ್ದ ರಿಯಲ್ ಹೀರೋ, ಪ್ರಕಾಶ್ ರಾಜ್​ ವಿರುದ್ಧ ಮಾ ಚುನಾವಣೆಗೆ ಸ್ಪರ್ಧಿಸ್ತಾರಾ…?

ಕಳೆದ ಲೋಕಸಭೆ ಚುನಾವಣೆಯಲ್ಲಿ ನಟ ಪ್ರಕಾಶ್ ರಾಜ್, ಬೆಂಗಳೂರು ಕೇಂದ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಅವರು…

Go to Top