ಶರನ್ನವರಾತ್ರಿ; ನವ ವಿಧದಲ್ಲಿ ನವದುರ್ಗೆಯ ಪೂಜೆ

in ಕನ್ನಡ ಮಾಹಿತಿ 481 views

ನವರಾತ್ರಿ ಹಬ್ಬಕ್ಕೆ ಇನ್ನೇನು ಕೆಲ ದಿನಗಳು ಮಾತ್ರ ಬಾಕಿಯಿದೆ. ಇಷ್ಟೊತ್ತಿಗಾಗಲೇ ನವರಾತ್ರಿ ಹಬ್ಬದ ಸಡಗರ-ಸಂಭ್ರಮ ನಾಡಿನಾದ್ಯಂತ ಆರಂಭವಾಗಬೇಕಿತ್ತು. ಆದರೆ ಈ ವರ್ಷ ಅಧಿಕ ಮಾಸ ಬಂದಿರುವುದರಿಂದ ಶರನ್ನವರಾತ್ರಿ ಒಂದು ತಿಂಗಳು ತಡವಾಗಿದೆ. ಅಲ್ಲದೇ ಈ ಬಾರಿ ಕೊರೊನಾ ವೈರಸ್ ಭೀತಿಯಿಂದಾಗಿ ಎಲ್ಲಾ ಹಬ್ಬಗಳು ಕಳೆಗುಂದಿವೆ. ಇದೇ ಮೊದಲಬಾರಿಗೆ ನಾಡ ಹಬ್ಬ ಮೈಸೂರು ದಸರಾ ಕೂಡ ತುಂಬಾ ಸರಳವಾಗಿ ನಡೆಯಲಿದೆ. ವಿಶ್ವವಿಖ್ಯಾತ ಜಂಬೂ ಸವಾರಿ ಕೇವಲ ಅರಮನೆ ಹಾಗೂ ಚಾಮುಂಡಿ ಬೆಟ್ಟಕ್ಕೆ ಮಾತ್ರ ಸೀಮಿತವಾಗಿರಲಿದೆ. ಈ ಬಾರಿ ಅ.17ರಂದು ಶಾರದಾ ಸ್ಥಾಪನೆಯೊಂದಿಗೆ ನವರಾತ್ರಿ ಆರಂಭಗೊಳ್ಳಲಿದೆ.ಈ ಬಾರಿ ಅಧಿಕ ಮಾಸದಿಂದಾಗಿ ನವರಾತ್ರಿಯಲ್ಲಿ ಹಲವು ಸಂಯೋಗಗಳು ಸೃಷ್ಟಿಯಾಗಲಿವೆ. ಈ ಬಾರಿ ನವರಾತ್ರಿಯಲ್ಲಿ ಗೃಹಗತಿಗಳ ಸ್ಥಿತಿಗತಿಯಿಂದಾಗಿ ರಾಜಯೋಗ, ದ್ವಿಪುಷ್ಕರ ಯೋಗ, ಸಿದ್ಧಿಯೋಗ, ಸರ್ವಾರ್ಥಸಿದ್ಧಿಯೋಗ ಹಾಗೂ ಅಮೃತ ಯೋಗಗಳಂತಹ ಹಲವು ಯೋಗಗಳು ನಿರ್ಮಾಣವಾಗುತ್ತಿವೆ. ದುರ್ಗಾ ಮಾತೆಯ ಪ್ರಾರ್ಥನೆಗೆ ಇದು ಉತ್ತಮವಾದ ಅವಕಾಶ. ನವರಾತ್ರಿ 9 ದಿನಗಳ ಕಾಲ ದೇವಿಯನ್ನು ಒಂಭತ್ತು ವಿಧದ ರೂಪಗಳಲ್ಲಿ ಆರಾಧಿಸಲಾಗುತ್ತದೆ. ಹತ್ತನೇಯ ದಿನ ‘ವಿಜಯ ದಶಮಿ’, ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ.

Advertisement

Advertisement

ಹಿಂದೆ ಐದು ನವರಾತ್ರಿ ಆಚರಣೆ ಪದ್ಧತಿಯಲ್ಲಿತ್ತು. ಆದರೀಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ’ಶರನ್ನವರಾತ್ರಿ’ ಇನ್ನೊಂದು ”ಚೈತ್ರ ನವರಾತ್ರಿ’. ಈಗ ನಾವು ಆಚರಿಸುವುದು ಶರನ್ನವರಾತ್ರಿ. ದೇಶಾದ್ಯಂತ ನವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ.

Advertisement

ಇತಿಹಾಸದ ಪ್ರಕಾರ ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ. ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ರಕ್ಷಿಸಿದಳು ಎಂಬುದು ನಂಬಿಕೆ. ನವರಾತ್ರಿಯ ಒಂದೊಂದು ದಿನವೂ ದೇವಿಯ ಆರಾಧನೆಗೆ ವಿಶಿಷ್ಠವಾಗಿರುತ್ತದೆ. 9 ದಿನಗಳ ಕಾಲ ಆದಿ ಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ. ನವದುರ್ಗೆಯನ್ನು ಯಾವೆಲ್ಲ ವಿಧಗಳಲ್ಲಿ ಪೂಜಿಸಲಾಗುತ್ತದೆ ಇಲ್ಲಿದೆ ಮಾಹಿತಿ.

Advertisement

ಮೊದಲ ದಿನ – ಪಾಡ್ಯ ಅಂದು ಯೋಗನಿದ್ರಾ ದುರ್ಗಾ ಪೂಜಾ
ಎರಡನೇ ದಿನ – ಆಂದರೆ ಬಿದಿಗೆ ದಿನ ದೇವಜಾತ ದುರ್ಗಾಪೂಜಾ
ಮೂರನೇ ದಿನ ತದಿಗೆ – ಮಹಿಷಾಸುರ ಮರ್ಧಿನಿ ದುರ್ಗಾಪೂಜಾ
ನಾಲ್ಕನೇ ದಿನ ಚತುರ್ದಶಿ – ಶೈಲ ಜಾತಾ ದುರ್ಗಾಪೂಜಾ
ಐದನೇ ದಿನ ಪಂಚಮಿ – ದೂಮೃಹಾ ದುರ್ಗಾಪೂಜಾ
ಆರನೇ ದಿನ ಶಷ್ಠಿ – ಚಂಡ-ಮುಂಡ ಹಾ ದುರ್ಗಾಪೂಜಾ
ಏಳನೇ ದಿನ ಸಪ್ತಮಿ – ರಕ್ತ ಬೀಜ ಹಾ ದುರ್ಗಾಪೂಜಾ
ಎಂಟನೇ ದಿನ ಅಷ್ಟಮಿ – ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ
ಏಳನೇ ದಿನ ಅಂದರೆ ಸಪ್ತಮಿಯಿಂದ ಮೂರು ದಿನಗಳ ಕಾಲ ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ಪೂಜೆ ಮಾಡಲಾಗುತ್ತದೆ. ನವರಾತ್ರಿಯಲ್ಲಿ ಸಪ್ತಮಿಗೆ ವಿಶೇಷ ಸ್ಥಾನವಿದೆ. ಸಪ್ತಮಿಯ ಮೂಲಾನಕ್ಷತ್ರದಂದು ಪುಸ್ತಕ, ಪವಿತ್ರಗ್ರಂಥಗಳನ್ನು, ಚಿನ್ನ, ಬೆಳ್ಳಿ ಪೂಜೆಗಿಡಲಾಗುತ್ತದೆ. ನವಮಿಯಂದು ಆಯುಧಗಳನ್ನು ಪೂಜಿಸಲಾಗುತ್ತದೆ. ಬಳಿಕ 9ನೇ ದಿನ ಶಾರದಾ ವಿಸರ್ಜನೆ ಮಾಡಿ, ಪುಸ್ತಕಗಳನ್ನು ಓದುವುದು ಪ್ರತೀಥಿ.

ಮಹಿಷಾಸುರ ಎಂಬ ರಾಕ್ಷನ ಸಂವಾರಕ್ಕಾಗಿ ದುರ್ಗೆ ಅವತಾರಗಳನ್ನು ತಾಳಿ ರಾಕ್ಷರ ಸಂವಾರ ಮಾಡುತ್ತಾಳೆ. ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವು ಉಲ್ಲೇಖಗಳಿವೆ. ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತ ವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ ರಾಕ್ಷಸರನ್ನು ಸಂಹರಿಸಿ ವಿಜಯವನ್ನು ಸಾಧಿಸಿದ ದಿನ.

ತ್ರೇತಾಯುಗದಲ್ಲಿ ಶ್ರೀರಾಮನು ರಾವಣನನ್ನು ಸಂಹಾರ ಮಾಡಿದನು. ಅದು ವಿಜಯದಶಮಿಯ ದಿನ ಎಂಬುದು ನಂಬಿಕೆ. ದ್ವಾಪರಾಯುಗದಲ್ಲಿ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡುವಾಗ ತಮ್ಮ ಆಯುಧಗಳನ್ನು ಬನ್ನಿ ಮರದಲ್ಲಿ ಬಚ್ಚಿಟ್ಟಿದ್ದರು. ದಶಮಿಯ ದಿನಕ್ಕೆ ಅಜ್ಞಾತವಾಸ ಮುಗಿದು, ಅವರು ಬನ್ನಿ ಮರದಿಂದ ತಮ್ಮ ಆಯುಧಗಳನ್ನು ವಾಪಸ್ಸು ಪಡೆದು ಕುರುಕ್ಷೇತ್ರ ಯುದ್ಧದಲ್ಲಿ ಕೌರವರನ್ನು ಸೋಲಿಸಿ ವಿಜಯ ಸಾಧಿಸಿದರು ಎಂದು ಹೇಳುತ್ತಾರೆ. ಹೀಗಾಗಿ ಈ ದಶಮಿಯನ್ನು ವಿಜಯದಶಮಿ ಎಂದು ಕರೆಯುತ್ತಾರೆ ಆದ್ದರಿಂದ ಇವರೆಲ್ಲರ ವಿಜಯದ ಸಂಕೇತವಾಗಿ ಈ ದಿನವನ್ನು ವಿಜಯದಶಮಿ ಎಂದು ಆಚರಿಸುತ್ತಾರೆ ಎಂಬುದು ವಾಡಿಕೆ.

ಶ್ರೀ ಆದಿಶಕ್ತಿ ಚೌಡೇಶ್ವರಿ ಆರಾಧಕರಾದ ಶ್ರೀ ಪಂಡಿತ್ ಶ್ರೀನಿವಾಸ್ ಭಟ್ ( ಕುಡ್ಲ ) ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಪ್ರಸಿದ್ಧ ಜ್ಯೋತಿಷ್ಯರು. ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ವ್ಯಾಪಾರ ಲಗ್ನ ಸಂತಾನ ಸ್ತ್ರೀ – ಪುರುಷ ವಶೀಕರಣ ಶತ್ರುನಾಶ ಮಾಟ ಮಂತ್ರ ಸತಿಪತಿ ಕಲಹ ರ ಮದುವೆ ದುಷ್ಟಶಕ್ತಿ ಲೈಂಗಿಕ ಸಮಸ್ಯೆ ಇತರ ಎಲ್ಲಾ ನಿಮ್ಮ ವೈಯಕ್ತಿಕ ಸಮಸ್ಯೆಗಳಿಗೆ 48 ಗಂಟೆಗಳ ಒಳಗೆ ಪರಿಹಾರ ಶತಸಿದ್ಧ. ಬೇರೆ ಜ್ಯೋತಿಷ್ಯರುಗಳ ಬಳಿ ಜ್ಯೋತಿಷ್ಯ ಕೇಳಿ ಪರಿಹಾರ ಸಿಗದೆ ನೊಂದಿದ್ದರೆ ಒಮ್ಮೆ ಕರೆ ಮಾಡಿ. ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ಜ್ಯೋತಿಷ್ಯ ಕೇಂದ್ರ Phone no : 9972245888 ಬದಲಾಗುತ್ತದೆ. ಫೋನಿನ ಮೂಲಕ ಪರಿಹಾರವನ್ನು ನೀಡಲಾಗುತ್ತದೆ.

ವಾಕ್ ಸಿದ್ಧಿ ಜಪ ಸಿದ್ಧಿ ಯಂತ್ರ ಸಿದ್ಧಿ ಹಾಗೂ ಮಂತ್ರ ಸಿದ್ಧಿಯಲ್ಲಿ ಪರಿಣಿತಿ ಹೊಂದಿರುವ ಪಂಡಿತ್ ಶ್ರೀನಿವಾಸ ಭಟ್ ಇವರು ವಶೀಕರಣ ಮಹಾ ಮಾಂತ್ರಿಕರು ಸರ್ವಸಿದ್ಧಿ ಸಾಧಕರಾದ ಇವರು ನಿಮ್ಮ ಧೀರ್ಘ ಕಾಲದ ಸಮಸ್ಯೆಗಳಿಗೆ ಮೂರೂ ದಿನದಲ್ಲಿ ಶಾಶ್ವತ ಪರಿಹಾರ ನೀಡುತ್ತಾರೆ. ಪ್ರೀತಿ ಪ್ರೇಮದ ಸಮಸ್ಯೆಗಳು ಅಥವ ಒಳ್ಳೆಯ ಸರ್ಕಾರೀ ಕೆಲಸ ಸಿಗಲು ಅಥವ ಹಣಕಾಸಿನ ಸಮಸ್ಯೆಗಳು ಅಥವ ಸ್ತ್ರೀ ವಶೀಕರಣ, ಹಾಗೂ ಪುರುಷ ವಶೀಕರಣ, ಅತ್ತೆ ಸೊಸೆ ಕಿರಿಕಿರಿ, ಸಂತಾನಫಲ, ಶತ್ರುನಾಶ, ರಾಜಕೀಯ, ಹಣಕಾಸಿನ ಸಮಸ್ಯೆ, ಇನ್ನು ಯಾವುದೇ ರೀತಿಯ ಗುಪ್ತ ಸಮಸ್ಯೆಗಳಿಗೂ ಸಹ 48 ಗಂಟೆಗಳ ಒಳಗೆ ಶಾಶ್ವತ ಪರಿಹಾರ. ಈ ಕೂಡಲೇ 9972245888 ಸಂಖ್ಯೆಗೆ ಕರೆ ಮಾಡಿರಿ.

Advertisement
Share this on...