karnataka rainfall heavy

ಮತ್ತೆ ವಾಯುಭಾರ ಕುಸಿತ: ರಾಜ್ಯದಲ್ಲಿ ಮಳೆಯ ಗರ್ಜನೆ

in ಕನ್ನಡ ಮಾಹಿತಿ/ಪ್ರವಾಹ 859 views

ಬೆಂಗಳೂರು: ಕೊರೊನಾ ಸಂಕಷ್ಟಕ್ಕೆ ಸಿಲುಕಿರುವ ಮಧ್ಯೆಯೇ ವರುಣನ ರುಧ್ರ ನರ್ತನಕ್ಕೆ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ನ್ನು ಹವಾಮಾನ ಇಲಾಖೆ ನೀಡಿದೆ. ಮತ್ತೇ ವಾಯುಭಾರ ಕುಸಿತ ಕಾಣಲಿದೆ. ರಾಜ್ಯದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಮಾನ್ಸೂನ್ ರಾಜ್ಯದಲ್ಲಿ ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ. ಹೌದು ರಾಜ್ಯಗಳಲ್ಲಿ ಮತ್ತೇ ಮಳೆರಾಯ ಆರ್ಭಟಿಸಲಿದ್ದಾನೆ..
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಮಾನ್ಸೂನ್ ರಾಜ್ಯದಲ್ಲಿ ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

Advertisement

Advertisement

ವಾಯುಭಾರ ಕುಸಿತದ ಪ್ರಭಾವ ಬಂಗಾಳ ಉಪಸಾಗರದ ಆಂಧ್ರಪ್ರದೇಶದ ಕರಾವಳಿ ಬಳಿ ಇದೆ. ಬಂಗಾಳ ಕೊಲ್ಲಿಯಲ್ಲಿ ಮತ್ತೆ  ವಾಯುಭಾರ ಕುಸಿತವಾಗಲಿದೆ. ಇದರ ಪ್ರಭಾವದಿಂದ ಉತ್ತರ ಒಳನಾಡಿನ  ಕೆಲವು ಕಡೆ ಮಾತ್ರ ಮಳೆಯಾಗಬಹುದು. ಅ.೨೦,೨೧ ಕ್ಕೆ ಮಳೆಯ ಪ್ರಮಾಣ ಏರಿಕೆಯಾಗಲಿದ್ದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಕಲ್ಬುರ್ಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳದಲ್ಲಿ, ಜಿಲ್ಲೆಗಳಲ್ಲಿ ಅ 20, 21 ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದರು. ಕರಾವಳಿ ಜಿಲ್ಲೆಗಳಲ್ಲಿ ಅ.೨೦, ೨೧ ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿಯೂ ಈ ಎರಡು ದಿನ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಹಗುರ ಮಳೆಯಾಗಲಿದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದರು.

Advertisement

ಅಕ್ಟೋಬರ್ ತಿಂಗಳಿನಲ್ಲಿ ಮಳೆಯಾಗುವುದು ಸಾಮಾನ್ಯ. ಆದರೆ, ಈ ಮಳೆ ನವೆಂಬರ್ ತಿಂಗಳವರೆಗೂ ಮುಂದುವರೆಯುವುದು ಅತ್ಯಂತ ವಿರಳ. ಈ ಬಾರಿ ನವೆಂಬರ್ ತಿಂಗಳವರೆಗೂ ಮಳೆಯಾಗುವ ಸಾಧ್ಯತೆಗಳಿವೆ. ಈ ಬಾರಿಯ ಮುಂಗಾರು ಸಮಯದಲ್ಲಿ ರಾಜ್ಯದಲ್ಲಿ ಶೇ.49ರಷ್ಟು ಮಳೆಯಾಗಿದೆ. ಅಕ್ಟೋಬರ್ ತಿಂಗಳೊಂದರಲ್ಲಿಯೇ ಶೇ.53ರಷ್ಟು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement

ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಹಾಗೂ ದಕ್ಷಿಣ ಭಾಗದ ಕರಾವಳಿ ತೀರ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisement
Share this on...