ಆರ್.ಆರ್.ನಗರ : ದೊಡ್ಡಗೌಡರ ತಂತ್ರಗಾರಿಕೆಗೆ ಮುನಿರತ್ನ ತತ್ತರ..! - Namma Kannada Suddi
h d devegowda

ಆರ್.ಆರ್.ನಗರ : ದೊಡ್ಡಗೌಡರ ತಂತ್ರಗಾರಿಕೆಗೆ ಮುನಿರತ್ನ ತತ್ತರ..!

in ರಾಜಕೀಯ 358 views

ಆರ್.ಆರ್.ನಗರದ ಉಪಚುನಾವಣೆಯ ಕಾವು ದಿನೇ ದಿನೇ ತೀವ್ರಗೊಳ್ಳುತ್ತಿದ್ದು, ಮೂರು ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ರವಿ ಮತ್ತು ಹಾಲಿ ಶಾಸಕ ಮತ್ತು ಬಿಜೆಪಿ ಅಭ್ಯರ್ಥಿ ಮುನಿರತ್ನ ನಡುವೆ ನೇರ ಹಣಾಹಣಿ ನಡೆಯಲಿದೆ ಎಂಬ ಮಾತುಗಳು ಪ್ರಾರಂಭದಲ್ಲಿ ಕೇಳಿ ಬರುತ್ತಿದ್ದವು. ಆದರೆ ಇದೀಗ ದಿಢೀರನೆ ಆರ್.ಆರ್.ನಗರದ ಕ್ಷೇತ್ರದ ಚಿತ್ರಣ ಬದಲಾಗುತ್ತಿದ್ದು, ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ ಕೂಡಾ ತೀವ್ರ ಸ್ಪರ್ಧೆ ನೀಡಲಿದ್ದಾರೆ ಎಂಬ ಮಾತುಗಳು ಆರ್.ಆರ್.ನಗರದ ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ. ಈ ದಿಢೀರ್ ಬದಲಾವಣೆಗೆ ಕಾರಣ ಜೆಡಿಎಸ್ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೊಸ ರಣತಂತ್ರ. ಹೌದು, ಆರ್.ಆರ್.ನಗರದ ಉಪಚುನಾವಣೆಯ ಅಖಾಡಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಎಂಟ್ರಿ ಕೊಡುತ್ತಲೇ ಕ್ಷೇತ್ರದ ಚಿತ್ರಣವೇ ಬದಲಾಗುತ್ತಿದ್ದು, ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಹೊಸ ಹುಮ್ಮಸ್ಸು ಬಂದಿದೆ. ಆರ್.ಆರ್.ನಗರದ ಕ್ಷೇತ್ರದಾದ್ಯಂತ ದಳಪತಿಗಳ ಪ್ರಚಾರ ಹೊಸ ಬಿರುಸು ಪಡೆದುಕೊಂಡಿದೆ. ಈ ಮಧ್ಯೆ ಪ್ರಚಾರದ ತಂತ್ರಗಾರಿಕೆಯನ್ನು ಬದಲಿಸಿರುವ ದಳಪತಿಗಳು ಅಬ್ಬರದ ಪ್ರಚಾರಕ್ಕೆ ಬ್ರೇಕ್ ಹಾಕಿ, ಮನೆ ಮನೆ ಪ್ರಚಾರಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ.

Advertisement

Advertisement

ಜೆಡಿಎಸ್ ವರಿಷ್ಠರಾದ ದೇವೇಗೌಡರ ಸೂಚನೆಯಂತೆ ಇದೀಗ ಆರ್.ಆರ್.ನಗರದಲ್ಲಿ ಮನೆ ಮನೆ ಪ್ರಚಾರಕ್ಕಾಗಿಯೇ ೫೦ ತಂಡಗಳನ್ನು ರಚಿಸಲಾಗಿದೆ. ಪ್ರತಿ ತಂಡಕ್ಕೆ ೧೦ ರಿಂದ ೧೫ ಬೂತ್ ಗಳ ಉಸ್ತುವಾರಿ ನೀಡಲಾಗಿದೆ. ಅದೇ ರೀತಿ ೧೦ ಶಾಸಕರಿಗೆ ಪ್ರತಿ ವಾರ್ಡ್ ನ ಜವಾಬ್ದಾರಿ ನೀಡಲಾಗಿದೆ. ಇದೆಲ್ಲದರ ಪರಿಣಾಮವಾಗಿ ಆರ್.ಆರ್.ನಗರದ ಕ್ಷೇತ್ರದಲ್ಲಿ ಜೆಡಿಎಸ್ ಗೆ ಹೊಸ ಬಲ ಬಂದಿದೆ. ಜೆಡಿಎಸ್ ಪಕ್ಷದ ಈ ತಂತ್ರಗಾರಿಕೆ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಭಾರೀ ಹಿನ್ನಡೆಯನ್ನು ಉಂಟುಮಾಡಲಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಎಚ್.ಡಿ‌.ದೇವೇಗೌಡರು ಮತ್ತು ಎಚ್.ಡಿ.ಕುಮಾರಸ್ವಾಮಿ ಅವರು ಬೆಂಗಳೂರು ನಗರಕ್ಕೆ ನೀಡಿರುವ ಕೊಡುಗೆಗಳನ್ನು ಮನವರಿಕೆ ಮಾಡಿಕೊಡುತ್ತಿದ್ದಾರೆ. ಇದರಿಂದಾಗಿ ಕ್ಷೇತ್ರದಲ್ಲಿ ಜೆಡಿಎಸ್ ಪರ ವಾತಾವರಣ ಸೃಷ್ಟಿಯಾಗುತ್ತಿದೆ.

Advertisement

ಇನ್ನು ಜೆಡಿಎಸ್ ವರಿಷ್ಠರಾದ ದೇವೇಗೌಡರು ಹೆಣೆದಿರುವ ಮನೆ ಮನೆಯ ಪ್ರಚಾರದ ತಂತ್ರಗಾರಿಕೆಯಿಂದ ಬಿಜೆಪಿಯ ಮತಗಳ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಹಾಲಿ ಶಾಸಕ ಮುನಿರತ್ನ ಮಾಡಿದ ಪಕ್ಷಾಂತರದಿಂದಾಗಿ ಉಪಚುನಾವಣೆ ಎದುರಾಗಿದೆ ಹೀಗಾಗಿ ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಮತದಾರರಿಗೆ ಮನವರಿಕೆ ಮಾಡಿಕೊಡುತ್ತಿರುವುದು ಮುನಿರತ್ನಗೆ ಹಿನ್ನಡೆಯನ್ನುಂಟು ಮಾಡಲಿದೆ.

Advertisement

Advertisement
Share this on...

Latest from ರಾಜಕೀಯ

ಅಭಿಮಾನಿ ತಮ್ಮನ್ನು ಬೀಳಿಸಿದರೂ ಕೋಪಗೊಳ್ಳದ ಪವನ್ ಕಲ್ಯಾಣ್…ನಿಮ್ಮ ಸಹನೆಗೆ ಹ್ಯಾಟ್ಸಾಫ್ ಎಂದ ನೆಟಿಜನ್ಸ್​​​​​​..ವಿಡಿಯೋ

ಪವನ್ ಕಲ್ಯಾಣ್, ಆಂಧ್ರ ಹಾಗೂ ತೆಲಂಗಾಣದಲ್ಲಿ ಪವರ್ ಸ್ಟಾರ್ ಎಂದೇ ಫೇಮಸ್. ನಟನಾಗಿ, ರಾಜಕೀಯ ನಾಯಕನಾಗಿ…

ತಮಿಳುನಾಡು ಸಿಎಂ ಭೇಟಿ ಮಾಡಿದ ಶಿವರಾಜ್​​ ಕುಮಾರ್ ದಂಪತಿ….ಭೇಟಿ ಬಗ್ಗೆ ಶಿವಣ್ಣ ಹೇಳಿದ್ದೇನು..?

ಬ್ಯುಸಿ ಶೆಡ್ಯೂಲ್ ನಡುವೆಯೂ ನಟ ಶಿವರಾಜ್ ಕುಮಾರ್ ಇತ್ತೀಚೆಗೆ ಮೈಸೂರಿನಿಂದ ಶಕ್ತಿಧಾಮದ ಮಕ್ಕಳನ್ನು ಬೆಂಗಳೂರಿಗೆ ಕರೆತಂದು…

ನನ್ನ ಕೆನ್ನೆಗಳನ್ನು ಇನ್ಮುಂದೆ ಜೋಪಾನವಾಗಿರಿಸಿಕೊಳ್ಳಬೇಕು…ಸಂಸದೆ ಹೇಮಾ ಮಾಲಿನಿ ಹೀಗೆ ಹೇಳಿದ್ದೇಕೆ…?

ರಾಜಕೀಯ ಮುಖಂಡರು ಕೆಲವೊಮ್ಮೆ ತಿಳಿದೋ, ತಿಳಿಯದೆಯೋ ನೀಡುವ ಕೆಲವೊಂದು ಹೇಳಿಕೆಗಳು ಇತರರ ಬೇಸರಕ್ಕೆ ಕಾರಣವಾಗುತ್ತದೆ. ಈ…

ಪಾಲಿಟಿಕ್ಸ್​​​​ ಬೇಡ ಎನ್ನುತ್ತಿದ್ದ ರಿಯಲ್ ಹೀರೋ, ಪ್ರಕಾಶ್ ರಾಜ್​ ವಿರುದ್ಧ ಮಾ ಚುನಾವಣೆಗೆ ಸ್ಪರ್ಧಿಸ್ತಾರಾ…?

ಕಳೆದ ಲೋಕಸಭೆ ಚುನಾವಣೆಯಲ್ಲಿ ನಟ ಪ್ರಕಾಶ್ ರಾಜ್, ಬೆಂಗಳೂರು ಕೇಂದ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಇದೀಗ ಅವರು…

Go to Top