ಅರ್ಧ ಪ್ರೇಕ್ಷಕರಿಗಾಗಿ ನಮ್ಮ ಸಿನಿಮಾ ಬಿಡುಗಡೆ ಮಾಡಲ್ಲ ಎಂದ ನಿರ್ಮಾಪಕರು

in ಮನರಂಜನೆ/ಸಿನಿಮಾ 46 views

ಅನ್ ಲಾಕ್ 5.0 ಮಾರ್ಗಸೂಚಿಯಲ್ಲಿ ಚಿತ್ರಮಂದಿರಗಳನ್ನು ತೆರೆಯಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ ಎಂದು ಈಗಾಗಲೇ ತಿಳಿದ ವಿಚಾರ. ಆದರೆ ಒಂದು ಪ್ರದರ್ಶನದಲ್ಲಿ ಶೇ.50 ರಷ್ಟು ಪ್ರೇಕ್ಷಕರು ಸಿನಿಮಾ ನೋಡಲು ಅವಕಾಶ ನೀಡಿಡುವ ಸಾಧ್ಯತೆ ಇರುವುದರಿಂದ ಚಿತ್ರ ನಿರ್ಮಾಪಕರು ಚಿತ್ರ ಬಿಡುಗಡೆಗೆ ಹಿಂದೇಟು ಹಾಕುತ್ತಿದ್ದಾರೆ. ಅಲ್ಲದೇ ಕೊರೊನಾದಂತ ಈ ಸಂದರ್ಭದಲ್ಲಿ ಜನರು ರಿಸ್ಕ್ ತೆಗೆದುಕೊಂಡು ಚಿತ್ರ ನೋಡಲು ಥಿಯೇಟರ್ ಗೆ ಬರುವ ಸಾಧ್ಯತೆ ಕಡಿಮೆ. ಹೀಗಾಗಿ ಹಲವು ನಿರ್ಮಾಪಕರು ತಮ್ಮ ಚಿತ್ರಗಳನ್ನು ಈ ಸಂದರ್ಭಗಳಲ್ಲಿ ಬಿಡುಗಡೆ ಮಾಡುವುದಿಲ್ಲ ಎಂದಿದ್ದಾರೆ. ಇದೇ ಮೊದಲ ಬಾರಿಗೆ ದುನಿಯಾ ವಿಜಯ್ ನಿರ್ದೇಶಿಸಿ, ಅಭಿನಯಿಸಿರುವ ’ಸಲಗ’ ಚಿತ್ರದ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಈ ಬಗ್ಗೆ ಮಾತನಾಡಿದ್ದು, ನಮ್ಮದು ದೊಡ್ಡ ಬಜೆಟ್ ಸಿನಿಮಾ. ಅರ್ಧ ಪ್ರೇಕ್ಷಕರಿಗೆ ಚಿತ್ರ ನೋಡಲು ಅವಕಾಶ ನೀಡಿದರೆ ನಮಗೆ ನಷ್ಟವಾಗುತ್ತದೆ. ಅರ್ಧ ಪ್ರೇಕ್ಷಕರಿಗಾಗಿ ಚಿತ್ರ ಬಿಡುಗಡೆ ಮಾಡಲು ನಾವು ಸಿದ್ಧರಿಲ್ಲ. ಹೀಗಾಗಿ ಸಧ್ಯಕ್ಕೆ ಸಲಗ ಚಿತ್ರ ಬಿಡುಗಡೆಯನ್ನೇ ಮಾಡಲ್ಲ ಎಂದಿದ್ದಾರೆ. ಅರ್ಧ ಪ್ರೇಕ್ಷಕರರಿಗಾಗಿ ಸಲಗ ಚಿತ್ರ ಬಿಡುಗಡೆ ಮಾಡಲ್ಲ. ನಷ್ಟವಾಗುತ್ತದೆ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಥಿಯೇಟರ್ ಓಪನ್ ಆದ ಮೇಲೆಯೇ ಸಲಗ ಚಿತ್ರ ತೆರೆಗೆ ಬರಲಿದೆ ಎಂದು ಹೇಳಿದರು.

Advertisement

Advertisement

ಇನ್ನು ಆಕ್ಟಿವ್ ಪ್ರೋಡ್ಯೂಸರ್ ಟೀಂನಿಂದ ಸಭೆ ಕರೆಯಲಾಗಿದ್ದು, ಆ ತಂಡದಲಿ ರಾಬರ್ಟ್, ಕೋಟಿಗೊಬ್ಬ, ಕೆಜಿಎಫ್ ಹಾಗೂ ಯುವರತ್ನ ಮೊದಲಾದ ಚಿತ್ರಗಳ ನಿರ್ಮಾಪಕರಿದ್ದಾರೆ. ಎಲ್ಲರೂ ಒಟ್ಟಾಗಿ ಕುಳಿತು ನಿರ್ಧಾರ ಮಾಡುತ್ತೇವೆ. ಯಾವ ಚಿತ್ರ ಬಿಡುಗಡೆ ಮಾಡಬೇಕು ಅನ್ನೋ ಬಗ್ಗೆಯೂ ನಿರ್ಧಾರ ಮಾಡ್ತೀವಿ. ಆದರೆ ದೊಡ್ಡ ಬಜೆಟ್‍ನ ಸಿನಿಮಾಗಳಿಗೆ ಅರ್ಧ ಪ್ರೇಕ್ಷಕರು ಸಾಕಾಗೋದಿಲ್ಲ. ನಮಗೆ ಪೂರ್ತಿ ಅನುಮತಿ ಸಿಕ್ಕರಷ್ಟೇ ನಾವು ಚಿತ್ರ ಬಿಡುಗಡೆ ಮಾಡಲು ಆಗೋದು. ಆನ್‍ಲೈನ್ ಫ್ಲಾಟ್‍ಫಾರ್ಮ್(ಓಟಿಟಿ) ವೇದಿಕೆಗಳು ದೊಡ್ಡ ಬಜೆಟ್ ಸಿನಿಮಾಗಳಿಗೆ ಸರಿ ಹೊಂದುವುದಿಲ್ಲ ಎಂದು ತಿಳಿಸಿದರು.

Advertisement

Advertisement

ಕೇಂದ್ರ ಸರ್ಕಾರ ಅನ್‍ಲಾಕ್ 5.0ರ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಚಿತ್ರಮಂದಿರ ಮತ್ತು ಈಜುಕೊಳ ತೆರೆಯಲು ಷರತ್ತುಬದ್ಧ ಅನುಮತಿ ನೀಡಿದೆ. ಬಹುತೇಕ ಚಟುವಟಿಕೆಗಳಿಗೆ ಅಕ್ಟೋಬರ್ 15ರ ನಂತರವೇ ಹಸಿರು ನಿಶಾನೆ ತೋರಿದೆ. ಹಾಗೇ ಸರ್ಕಾರ ಮೈಕ್ರೋ ಲೆವಲ್ ಕಂಟೈನ್‍ಮೆಂಟ್ ಝೋನ್ ಮಾಡಲು ಜಿಲ್ಲಾಡಳಿತಗಳಿಗೆ ಅವಕಾಶ ನೀಡಿದೆ. ಈ ಲಾಕ್‍ಡೌನ್ ಅಕ್ಟೋಬರ್ 31ರವರೆಗೆ ಮುಂದುವರಿಯಲಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ದೇವಿ ಕೃಪೆಯಿಂದ ಈ ರಾಶಿಗಳಿಗೆ ಇಂದು , ಇಂದಿನ ನಿಮ್ಮ ರಾಶಿ ಭವಿಷ್ಯ ನಿಮ್ಮ ಸಮಸ್ಯೆ ಏನೇ ಇರಲಿ ಕರೆ ಮಾಡಿ9886027322. ದಕ್ಷಿಣ ಕನ್ನಡದ 108 ಜ್ಯೋತಿಷ್ಯ ತಂತ್ರಗಳಿಂದ ನಿಮ್ಮ ನಿಗೂಢ ಗುಪ್ತ ಸಮಸ್ಯೆಗಳಿಗೆ, ತಾಂಬೂಲ ಪ್ರಶ್ನೆ ಮತ್ತು ಆರೂಢ ಪ್ರಶ್ನೆಯಿಂದ ಕೇವಲ 11 ದಿನದಲ್ಲೇ ಶಾಶ್ವತ ಪರಿಹಾರ. ಪ್ರಧಾನ ಅರ್ಚಕರು ಹಾಗೂ ಪ್ರಧಾನ ತಾಂತ್ರಿಕರು ಶ್ರೀ ಸುಬ್ರಮಣ್ಯ ಆಚಾರ್ಯ ದೈವಶಕ್ತಿ ಜ್ಯೋತಿಷ್ಯರು . ಇನ್ನು ನಿಮ್ಮ ಜೀವನದಲ್ಲಿ ಯಾವುದೇ ಗುಪ್ತ ಸಮಸ್ಯೆಗಳಿದ್ದರೂ ಕೇರಳದ 18 ದೈವಿಕ ಪೂಜಾ ಶಕ್ತಿಗಳಿಂದ ಪರಿಹಾರ ಮಾಡಿಕೊಡುತ್ತಾರೆ .ನಿಮ್ಮಲ್ಲಿ ಸಮಸ್ಯೆಗಳಾದ ಮಾಟ ಮಂತ್ರ ನಿವಾರಣೆ, ಕೋರ್ಟ್ ವಿಚಾರ ,ಆಸ್ತಿ ವಿಚಾರ , ಹಣಕಾಸಿನ ಸಮಸ್ಯೆ, ಸತಿಪತಿ ಕಲಹ , ಅತ್ತೆ-ಸೊಸೆ ಕಲಹ , ಮಕ್ಕಳ ವಿದ್ಯಭ್ಯಾಸದಲ್ಲಿ ತೊಂದರೆ, ಪ್ರೇಮ ಸಂಬಂಧದಂತ ಯಾವುದೇ ಸಮಸ್ಯೆಗಳಿಗೆ ಇಂದೇ ಕರೆ ಮಾಡಿ. 9886027322 ಪರಿಹಾರ ಮಾಡಿಕೊಡುತ್ತಾರೆ.

Advertisement