ಸಾಲು-ಸಾಲು ನೆರವು ಘೋಷಿಸಿ ಟೀಕೆಗಳಿಗೆ ಬ್ರೇಕ್…!

in News/ಕನ್ನಡ ಮಾಹಿತಿ 20 views

ಭಾರತದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಕೋರೊನಾ ವೈರಸ್ ಸೋಂಕು ಹರಡುವಿಕೆಯನ್ನು ತಡೆಯಲು ಸರ್ಕಾರ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದೆ. ಅಷ್ಟೇ ಅಲ್ಲದೆ ಮಹಾಮಾರಿ ವಿರುದ್ಧ ಹೋರಾಟ ನಡೆಸುತ್ತಿದೆ. ಲಾಕ್ ಡೌನ್ ಹಿನ್ನಲೆ ದೇಶದ ಆರ್ಥಿಕತೆಯು ಕುಸಿದಿದ್ದು, ಎಲ್ಲರೂ ಕೋರೋನಾ ಹೋರಾಟಕ್ಕೆ ಸರ್ಕಾರದ ಜೊತೆ ಕೈ ಜೋಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇಳಿಕೊಂಡಿದ್ದರು. ಹೀಗಾಗಿ ಅನೇಕ ಕ್ರೀಡಾಪಟುಗಳು ಸಿನಿಮಾ ತಾರೆಯರು ಸರ್ಕಾರಕ್ಕೆ ದೇಣಿಗೆ ನೀಡುವ ಮೂಲಕ ಸಹಾಯಹಸ್ತ ಚಾಚಿದರು.

Advertisement

 

Advertisement

Advertisement

 

Advertisement

ಆದರೆ ಬಾಲಿವುಡ್ ಬಾಷಾ ಶಾರುಖ್ ಖಾನ್ ಸಂಕಷ್ಟದ ಪರಿಸ್ಥಿತಿಯಲ್ಲಿ ದೇಶದ ನೆರವಿಗೆ ಮುಂದೆ ಬಂದಿಲ್ಲ ಎಂಬ ಟೀಕೆಗಳು ಕೇಳಿಬಂದಿದ್ದವು. ಈಗ ಈ ಟೀಕೆಗಳಿಗೆ ಶಾರುಕ್ ಬ್ರೇಕ್ ಹಾಕಿದ್ದು ಸಾಲುಸಾಲು ನೆರವುಗಳನ್ನು ಘೋಷಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ. ತಮ್ಮ ವಿವಿಧ ಫೌಂಡೇಶನ್ ಗಳ ಮೂಲಕ ದೇಶಕ್ಕೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಧಾನಿ ಹಾಗೂ ಮಹಾರಾಷ್ಟ್ರದ ಸಿ.ಎಂ ಪರಿಹಾರ ನಿಧಿಗಳಿಗೂ ದೇಣಿಗೆ ನೀಡುವುದಾಗಿ ಹೇಳಿಕೊಂಡಿದ್ದಾರೆ. ಮಹಾರಾಷ್ಟ್ರದ ಸಿ.ಎಂ ಪರಿಹಾರ ನಿಧಿಗೆ ದೇಣಿಗೆ ನೀಡುವುದರ ಜೊತೆಗೆ ಮುಂಬೈ ನಗರದಲ್ಲಿ ಬಡವರಿಗೆ ಸಹಾಯ ಮಾಡುವುದಾಗಿ ಶಾರುಖ್ ಖಾನ್ ತಿಳಿಸಿದ್ದಾರೆ.

 

 

ಶಾರುಖ್ ಖಾನ್ ರವರ ಈ ನೆರವಿಗಾಗಿ ಮಹಾರಾಷ್ಟ್ರದ ಸಿ.ಎಂ ಶಾರುಖ್ ಖಾನ್ ಮತ್ತು ಗೌರಿ ಖಾನ್ ರವರಿಗೆ ಧನ್ಯವಾದ ತಿಳಿಸಿದ್ದಾರೆ. ಪ್ರಧಾನಮಂತ್ರಿ ಮಹಾರಾಷ್ಟ್ರ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಶಾರುಖ್ ಖಾನ್ ದೇಣಿಗೆ ನೀಡುವುದಾಗಿ ಘೋಷಿಸಿಕೊಂಡಿದ್ದಾರೆ.

ಕೆಕೆಆರ್ ಮತ್ತು ಮೀರ್ ಫೌಂಡೇಶನ್ ವತಿಯಿಂದ 50 ಸಾವಿರ ಆರೋಗ್ಯಕಿಟ್, ರೋಟಿ ಮತ್ತು ಮೀರ್ ಫೌಂಡೇಶನ್ ಕಡೆಯಿಂದ 2 ಲಕ್ಷ ಊಟದ ಕಿಟ್ ನೀಡಲಾಗುತ್ತಿದೆ. ಅಷ್ಟೇ ಅಲ್ಲದೆ ಅರ್ಥ್ ಫೌಂಡೇಶನ್ ಮತ್ತು ಮೀರ್ ಫೌಂಡೇಶನ್ ಮೂಲಕ ಮುಂಬೈ ಒಂದರಲ್ಲಿಯೇ 5500 ಮಂದಿಗೆ ಒಂದು ತಿಂಗಳ ಆಹಾರ ಸಾಮಗ್ರಿಗಳನ್ನು ವಿತರಿಸಲಾಗಿದೆ.

 

 

ಪ್ರತಿದಿನ ಎರಡು ಸಾವಿರ ಜನರಿಗೆ ಆಹಾರ ಸರಬರಾಜು ಮಾಡಲಾಗುತ್ತಿದೆ ಎಂದು ಶಾರುಖ್ ಖಾನ್ ಮಾಹಿತಿ ನೀಡಿದ್ದಾರೆ. ಕೋರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸುವಂತೆ ಪ್ರಧಾನಿ ನೀಡಿದ ಕರೆಗೆ ನಟ ಅಕ್ಷಯ್ ಕುಮಾರ್ ಕ್ರಿಕೆಟಿಗರಾದ ವಿರಾಟ್ ಕೊಹ್ಲಿ, ಸುರೇಶ್ ರೈನಾ, ಸಚಿನ್, ರೋಹಿತ್ ಶರ್ಮಾ, ಕುಸ್ತಿಪಟು ಭುಜಂಗ ಪುಣೆಯ ಸೇರಿದಂತೆ ಅನೇಕರು ಬಾರಿ ಮೊತ್ತದ ದೇಣಿಗೆ ನೀಡುವ ಮೂಲಕ ಕೈ ಜೋಡಿಸಿದ್ದಾರೆ. ಇತ್ತ ಸಲ್ಮಾನ್ ಖಾನ್ ಕೂಡ ಸಂಕಷ್ಟಕ್ಕೀಡಾದ 25 ಸಾವಿರ ಸಿನಿಮಾ ಕಾರ್ಮಿಕರ ನೆರವಿಗೆ ನಿಂತಿದ್ದಾರೆ.

– ಸುಷ್ಮಿತಾ

Advertisement
Share this on...