ಕಿರುತೆರೆಯಲ್ಲಿ ಮೋಡಿ ಮಾಡುತ್ತಿರುವ ಈಕೆಯ ಬಣ್ಣದ ಬದುಕಿಗೆ ಮುನ್ನುಡಿ ಬರೆದದ್ದು ಹಿರಿತೆರೆ!

in ಮನರಂಜನೆ/ಸಿನಿಮಾ 395 views

ಬಣ್ಣದ ಲೋಕವೇ ಹಾಗೇ! ಎಲ್ಲರನ್ನು ತನ್ನತ್ತ ಆಕರ್ಷಿಸುತ್ತದೆ. ಬಣ್ಣದ ಲೋಕಕ್ಕೆ ಕಾಲಿಟ್ಟ ಹಲವರು ಇಂದು ಇಲ್ಲಿಯೇ ಬದುಕು ಕಟ್ಟಿಕೊಳ್ಳುತ್ತಾರೆ. ಮಾತ್ರವಲ್ಲ, ಬೆಳ್ಳಿತೆರೆಯ ಮೂಲಕ ಬಣ್ಣದ ಜಗತ್ತಿಗೆ ಕಾಲಿಟ್ಟ ಅನೇಕರು ಇಂದು ಕಿರುತೆರೆಗೆ ಕಾಲಿಟ್ಟಿದ್ದಾರೆ. ಆ ಮೂಲಕ ಕೇವಲ ಬೆಳ್ಳಿತೆರೆ ಮಾತ್ರವಲ್ಲದೇ ಕಿರುತೆರೆಯಲ್ಲಿಯೂ ತಮ್ಮ ನಟನಾ ಕಂಪನ್ನು ಪಸರಿಸುತ್ತಿದ್ದಾರೆ. ಆ ಪೈಕಿ ತೇಜಸ್ವಿನಿ ಪ್ರಕಾಶ್ ಕೂಡಾ ಒಬ್ಬರು. ಕಲರ್ಸ್ ಕನ್ನಡ ವಾಹಿನಿಯಲ್ಲಿ ವಿನೋದ್ ದೊಂಡಾಳೆ ನಿರ್ದೇಶನದ ಪ್ರಸಾರವಾಗುತ್ತಿರುವ ನನ್ನರಸಿ ರಾಧೆ ಧಾರಾವಾಹಿಯಲ್ಲಿ ವಿಲನ್ ಲಾವಣ್ಯ ಆಗಿ ಅಭಿನಯಿಸುತ್ತಿರುವ ತೇಜಸ್ವಿನಿ ಪ್ರಕಾಶ್ ನಿಹಾರಿಕಾ ಧಾರಾವಾಹಿಯ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟರು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ, ವಿನು ಬಳಂಜ ನಿರ್ದೇಶನದ ನಿಹಾರಿಕಾ ಧಾರಾವಾಹಿಯಲ್ಲಿ ನಾಯಕಿ ನಿಹಾರಿಕಾಳಾಗಿ ನಟಿಸಿ ವೀಕ್ಷಕರ ಮನ ಸೆಳೆದಿರುವ ಚೆಂದುಳ್ಳಿ ಚೆಲುವೆ ಮೊದಲ ಬಾರಿ ಕಾಣಿಸಿಕೊಂಡಿದ್ದು ಬೆಳ್ಳಿತೆರೆಯಲ್ಲಿ.

Advertisement

Advertisement

ಮಸಣದ ಮಕ್ಕಳು ಸಿನಿಮಾದ ಮೂಲಕ ನಟನಾ ಕ್ಷೇತ್ರಕ್ಕೆ ಬಂದಿರುವ ತೇಜಸ್ವಿನಿ ಪ್ರಕಾಶ್ ಮೊದಲ ಸಿನಿಮಾದಲ್ಲಿಯೇ ಉತ್ತಮ ನಟಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಚೆಲುವೆ. ಮುಂದೆ ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ಗಜ ಸಿನಿಮಾದಲ್ಲಿ ದರ್ಶನ್ ಅವರ ತಂಗಿಯಾಗಿ ತೇಜಸ್ವಿನಿ ಕಾಣಿಸಿಕೊಂಡರು. ತದ ನಂತರ ಈ ಪ್ರೀತಿ ಏಕೆ ಭೂಮಿ ಮೇಲಿದೆ, ಮಾತಾಡ್ ಮಾತಾಡ್ ಮಲ್ಲಿಗೆ, ಗೂಳಿ ಹಟ್ಟಿ, ಸವಿ ಸವಿ ನೆನಪು, ಬಂಧು ಬಳಗ, ಅರಮನೆ, ಜೊತೆಯಾಗಿ ಹಿತವಾಗಿ, ತರಂಗಿಣಿ, ಪ್ರೀತಿ ನೀ ಹೀಂಗ್ಯಾಕೆ, ಕಿಲಾಡಿ ಕೃಷ್ಣ, ನಂದಗೋಕುಲ, ಕಲ್ಯಾಣ ಮಸ್ತು, ನಿತ್ಯ ಜೊತೆ ಸತ್ಯ, ಡಯಾನಾ ಹೌಸ್ ಮುಂತಾದ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ ತೇಜಸ್ವಿನಿ.

Advertisement

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿಯಾಗಿ ಕಾಣಿಸಿಕೊಂಡ ತೇಜಸ್ವಿನಿ ಪ್ರಕಾಶ್ ಅಲ್ಲೂ ಕೂಡಾ ವೀಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾದರು. ಇಂತಿಪ್ಪ ಮುದ್ದು ಮುಖದ ಚೆಲುವೆ ತೇಜಸ್ವಿನಿ ಪ್ರಕಾಶ್ ಕೇವಲ ಕನ್ನಡಭಾಷೆಯಲ್ಲಿ ಪರಭಾಷೆಯಲ್ಲಿಯೂ ತಮ್ಮ ನಟನಾ ಕಂಪನ್ನು ಪಸರಿಸಿದ್ದಾರೆ.

Advertisement

ತೆಲುಗಿನ ಪ್ರತಿಕ್ಷಣಂ ಹಾಗೂ ಕಣ್ಣಲೋ ನೀ ರೂಪಮಯೇ ಎಂಬ ಸಿನಿಮಾಗಳಲ್ಲಿ ನಟಿಸಿರುವ ತೇಜಸ್ವಿನಿ ಸದ್ಯ ಲಾವಣ್ಯ ಆಗಿ ಬ್ಯುಸಿಯಾಗಿದ್ದಾರೆ. ಮೊದಲ ಬಾರಿಗೆ ನೆಗೆಟಿವ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಿರುವ ತೇಜಸ್ವಿನಿ ಅಭಿನಯಕ್ಕೆ ಕಿರುತೆರೆ ವೀಕ್ಷಕರು ಫಿದಾ ಆಗಿದ್ದಾರೆ. ನನ್ನರಸಿ ರಾಧೆ ಸೇರಿ ಕೇವಲ ಎರಡೇ ಧಾರಾವಾಹಿಗಳಲ್ಲಿ ತೇಜಸ್ವಿನಿ ನಟಿಸಿದ್ದರೂ ತಮ್ಮ ಮನೋಜ್ಞ ಅಭಿನಯದ ಮೂಲಕ ವೀಕ್ಷಕರ ಮನದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ.
– ಅಹಲ್ಯಾ

Advertisement
Share this on...